ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ.
ಚಿತ್ತಾರಗೇರಿಯಲ್ಲಿರುವ ಮೃತ ಖಲೀಲ್ ಅವರ ಮನೆಗೆ ಬೇಟಿಕೊಟ್ಟು ಕುಟುಂಬದವರಿಗೆ ಸಾಂತ್ವನ ಹೇಳಿದರು. ಪೊಲೀಸರ ಹಲ್ಲೆಯಿಂದ ಠಾಣೆಯಲ್ಲಿ ಮೃತಪಟ್ಟಿದ್ದ ಖಲೀಲ್ ಅವರ ಕುಟುಂಬಕ್ಕೆ ಸರ್ಕಾರ ತಕ್ಷಣವೇ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಠಾಣೆಯ ತಪ್ಪಿತಸ್ಥ ಅಧಿಕಾರಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಲಾಕಡೆತ್ ಪ್ರಕರಣದ ನೈತಿಕ ಹೊಣೆ ಹೊತ್ತು ಗೃಹ ಸಚಿವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿರುದ್ದ ಕ್ರಮ ಜರುಗಿಸದಿದ್ದರೆ, ಉಗ್ರ ಹೋರಾಟ ಮಾಡುವುದಾಗಿ ಸಂತೋಷ ಗುಳೇದಹಟ್ಟಿ ಎಚ್ಚರಿಕೆ ನೀಡಿದರು.
ಸಿಪಿಐ(ಎಂಎಲ್) ಜಿಲ್ಲಾ ಕಾರ್ಯದರ್ಶಿ ಸಂದೇರ ಪರಶುರಾಮ್, ಮುಖಂಡರಾದ ಗುಳೇದಹಟ್ಟಿ, ಕರ್ನಾಟಕ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಬಾಬು ಬಿ., ಆಸಿಫ್ ಕೆ. ಇದ್ದರು.
Leave a comment