Home ಸಿಲಿಂಡರ್ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ
Homeಸುದ್ದಿಗಳು

ಸಿಲಿಂಡರ್ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ

Share
Share

ದಾವಣಗೆರೆ : ಜಿಲ್ಲೆಯ ಎಲ್ಲಾ ಬಿಪಿಸಿಎಲ್, ಹೆಚ್‍ಪಿಸಿಎಲ್ ಹಾಗೂ   ಐಓಸಿಎಲ್ ಅನಿಲ ಗ್ರಾಹಕರ ತಮ್ಮ ಬಾಕಿ ಇರುವ ಇ-ಕೆವೈಸಿ ಪ್ರಕ್ರಿಯೆಯನ್ನು ಆಗಸ್ಟ್ 15 ರೊಳಗಾಗಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಗ್ರಾಹಕರ ಪರಿಶೀಲನೆಯನ್ನು ಬಲಪಡಿಸಲು, ಅರ್ಹ ಫಲಾನುಭವಿಗಳ ನಿಖರ ದಾಖಲೆಗಳನ್ನು ನಿರ್ವಹಿಸಲು ಮತ್ತು ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವನ್ನು ಕೈಗೊಳ್ಳಲಾಗಿದೆ.

ನಿಗಧಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸದ ಅನಿಲ ಗ್ರಾಹಕರ ಎಲ್‍ಪಿಜಿ ಸಂಪರ್ಕವನ್ನು ತಾತ್ಕಾಲಿಕವಾಗಿ ಅಮಾನತ್ತುಗೊಳಿಸಲಾಗುವುದು. ಗ್ರಾಹಕರು ತಮ್ಮ ವ್ಯಾಪ್ತಿಯ ಗ್ಯಾಸ್ ವಿತರಕರ ಕಚೇರಿಗಳು, ವಿಶೇಷ ಶಿಬಿರಗಳು ಅಥವಾ ಗ್ಯಾಸ್ ಡೋರ್ ಡಿಲೇವರಿ ಸಂದರ್ಭದಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.  ಸಾರ್ವಜನಿಕರು ಗ್ಯಾಸ್ ಪೂರೈಕೆಯಲ್ಲಿ ಆಗುವ ವ್ಯತ್ಯಯವನ್ನು ತಪ್ಪಿಸಲು ತಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ. ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
DKS BANGLORE
Homeರಾಜಕೀಯ

ಕೆ.ಎಚ್.ಮುನಿಯಪ್ಪಗೆ ಸಮಾಜ ಕಲ್ಯಾಣ, ಉಳಿದವರಿಗೆ ಯಾವ ಖಾತೆ ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ...

Homeಸುದ್ದಿಗಳು

ಅರಸೀಕೆರೆಯಲ್ಲಿ 6ನೇ ತಾಲ್ಲೂಕು ಸಮ್ಮೇಳನಕ್ಕೆ ಸಮ್ಮತಿ

ಹರಪನಹಳ್ಳಿ : ಕನ್ನಡ ಸಾಹಿತ್ಯ ಸಮ್ಮೇಳನ ಗ್ರಾಮೀಣ ಪ್ರದೇಶಕ್ಕೆ ಪಸರಿಸುವ ನಿಟ್ಟಿನಲ್ಲಿ ಅರಸೀಕೆರೆಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ...

Homeಸುದ್ದಿಗಳು

ಮಾದರ ಮಹಾಸಭಾ ಸದಸ್ಯತ್ವ ನೊಂದಣಿಗೆ ಚಾಲನೆ

ಹರಪನಹಳ್ಳಿ : ರಾಜ್ಯಾಧ್ಯಂತ ಮಾದರ ಮಹಾಸಭಾ ಸದೃಢವಾಗಿ ಕಟ್ಟಲು ಸದಸ್ಯತ್ವ ನೊಂದಾಣಿ ಆರಂಭಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ...

Homeಸುದ್ದಿಗಳು

ಅಂಚೆ ಇಲಾಖೆಯಿಂದ ಆಧಾರ್ ಸೇವೆಗಳ ವಿಸ್ತರಣೆ

ವಿಜಯನಗರ : ಜಿಲ್ಲೆಯ ಸಾರ್ವಜನಿಕರಿಗೆ ಸುಲಭ, ಸುರಕ್ಷಿತ ಹಾಗೂ ಆಧಾರ್ ನವೀಕರಣ ಸೇರಿದಂತೆ ವಿವಿದ ಆಧಾರ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.