Home ಜಿಲ್ಲೆಯಾದ್ಯಂತ ಆಗಸ್ಟ್ 17 ರವರೆಗೆ ಹರ್ ಘರ್ ತಿರಂಗಾ ಅಭಿಯಾನ
Homeಸುದ್ದಿಗಳು

ಜಿಲ್ಲೆಯಾದ್ಯಂತ ಆಗಸ್ಟ್ 17 ರವರೆಗೆ ಹರ್ ಘರ್ ತಿರಂಗಾ ಅಭಿಯಾನ

Share
Share

ವಿಜಯನಗರ : ಪ್ರಸಕ್ತ ಸಾಲಿನ 80ನೇ ರಾಷ್ಟ್ರೀಯ  ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಆಗಸ್ಟ್ 17 ರವರೆಗೆ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ ಕೇಂದ್ರ ಸರ್ಕಾರವು ಆರಂಭಿಸಿರುವ ಈ ಅಭಿಯಾನವು ಪ್ರತಿಯೊಬ್ಬ ನಾಗರಿಕರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಪ್ರೋತ್ಸಾಹಿಸುವುದು ಮತ್ತು ತ್ರಿವರ್ಣ ಧ್ವಜದೊಂದಿಗೆ ವೈಯಕ್ತಿಕ ಹಾಗೂ ಭಾವನಾತ್ಮಕ ಬಾಂಧವ್ಯವನ್ನು ಬೆಳೆಸಿಕೊಳ್ಳುವುದು ಕಾರ್ಯಕ್ರಮದ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ತಿರಂಗಾ ರ್ಯಾಲಿಗಳು, ಸೈಕಲ್ ಮತ್ತು ಬೈಕ್ ಜಾಥಾಗಳನ್ನು ಆಯೋಜಿಸುವುದು. ರಾಷ್ಟ್ರಗೀತೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಾರ್ವಜನಿಕರನ್ನು ಒಳಗೊಂಡಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಸಾರ್ವಜನಿಕ ಸ್ಥಳ, ಅಂಗಡಿ, ಮಾಲ್, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ, ಸರ್ಕಾರಿ ಕಚೇರಿಗಳು, ಸೇತುವೆಗಳು ಹಾಗೂ ಶಾಲೆ-ಕಾಲೇಜುಗಳಲ್ಲಿ ಧ್ವಜಾರೋಹಣ ನಡೆಸಿ ದೀಪಾಲಂಕಾರ ಮಾಡುವುದು.

ಸಾರ್ವಜನಿಕ ವೃತ್ತಗಳು ಹಾಗೂ ಕಾಲುದಾರಿಗಳಲ್ಲಿ ತಿರಂಗಾ ಆಧಾರಿತ ರಂಗೋಲಿಗಳನ್ನು ಬಿಡಿಸುವುದು. ಜೊತೆಗೆ ಶಾಲೆ ಕಾಲೇಜುಗಳಲ್ಲಿ ರಾಷ್ಟ್ರಗೀತೆ, ತ್ರಿವರ್ಣ ಧ್ವಜ ಆಧಾರಿತ ಚಿತ್ರಕಲೆ ಹಾಗೂ ಸ್ವಾತಂತ್ರ‍್ಯ ಹೋರಾಟಗಾರರ ಕುರಿತು ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಬೇಕು. ಸಾರ್ವಜನಿಕರು ಹಾಗೂ ಸರ್ಕಾರಿ ನೌಕರರು ಅಭಿಯಾನದಲ್ಲಿ ಭಾಗವಹಿಸಿ, ತಮ್ಮ ಸೆಲ್ಫಿ, ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸುವುದರ ಜೊತೆಗೆ ಅಧಿಕೃತ ಜಾಲತಾಣ  ಅಪ್‌ಲೋಡ್ಮಾ ಡಬಹುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

“ಶ್ರಮಿಕನಿಂದ ಧ್ವಜಾರೋಹಣ”

ಹರಪನಹಳ್ಳಿ : ಪಟ್ಟಣದ ಹೊರ ಹೊಲದಲ್ಲಿರುವ ಪ್ರಕೃತಿ ವಿದ್ಯಾ ಸಂಸ್ಥೆಯ ಪರ್ಲ್ ಪಬ್ಲಿಕ್ ಶಾಲೆಯಲ್ಲಿ 80ನೇ...

Homeಸುದ್ದಿಗಳು

ವ್ಯಕ್ತಿ ಕಾಣೆ ಪತ್ತೆಗೆ ಮನವಿ

ವಿಜಯನಗರ : ತಾಲೂಕಿನ ಚಿತ್ರಕೇರಿ 34ನೇ ವಾರ್ಡ್ ನಿವಾಸಿ ಎಸ್. ಉಮೇಶ ತಂದೆ ಲೇಟ್ ಸೋಮಣ್ಣ...

Homeಸುದ್ದಿಗಳು

ಶಿಕ್ಷಕನಿಗೆ ನಿಂದನೆ: ಶಾಲಾ ಕಾರ್ಯದರ್ಶಿ ವಿರುದ್ಧ ಕ್ರಮಕ್ಕೆ ಆಗ್ರಹ

ಹರಪನಹಳ್ಳಿ: ತಾಲ್ಲೂಕಿನ ಗುಂಡಗತ್ತಿ ಗ್ರಾಮದ ಶ್ರೀ ವೆಂಕಟೇಶ್ವರ ಪ್ರೌಢಶಾಲೆಯ ಆಡಳಿತ ಮಂಡಳಿ ಅವರು ಶಾಲೆಯ ದೈಹಿಕ...

Homeಸುದ್ದಿಗಳು

ಹರಪನಹಳ್ಳಿಯಲ್ಲಿ ಬಿಜೆಪಿ ವತಿಯಿಂದ ವಿಜೃಂಭಣೆಯ ‘ಹರ್ ಘರ್ ತಿರಂಗ’ ಬೈಕ್ ರ್ಯಾಲಿ

ಹರಪನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ನಗರದಲ್ಲಿ ಶುಕ್ರವಾರ ಭಾರತೀಯ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.