Home ಶಿಕ್ಷಕನಿಗೆ ನಿಂದನೆ: ಶಾಲಾ ಕಾರ್ಯದರ್ಶಿ ವಿರುದ್ಧ ಕ್ರಮಕ್ಕೆ ಆಗ್ರಹ
Homeಸುದ್ದಿಗಳು

ಶಿಕ್ಷಕನಿಗೆ ನಿಂದನೆ: ಶಾಲಾ ಕಾರ್ಯದರ್ಶಿ ವಿರುದ್ಧ ಕ್ರಮಕ್ಕೆ ಆಗ್ರಹ

Share
Share

ಹರಪನಹಳ್ಳಿ: ತಾಲ್ಲೂಕಿನ ಗುಂಡಗತ್ತಿ ಗ್ರಾಮದ ಶ್ರೀ ವೆಂಕಟೇಶ್ವರ ಪ್ರೌಢಶಾಲೆಯ ಆಡಳಿತ ಮಂಡಳಿ ಅವರು ಶಾಲೆಯ ದೈಹಿಕ ಶಿಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಶಾಲೆಯ ದೈಹಿಕ ಶಿಕ್ಷಕ ಕುಮಾರ್ ಅವರು ಕೆಲವು ದಿನಗಳ ಕಾಲ ಶಾಲೆಗೆ ಗೈರು ಹಾಜರಾಗಿದ್ದರು. ಈ ವಿಚಾರವಾಗಿ ಶಾಲಾ  ಕಾರ್ಯದರ್ಶಿ ಕಾಶಿನಾಥ್ ಅವರು ಶಿಕ್ಷಕ ಕುಮಾರ್ ಅವರನ್ನು ಅತ್ಯಂತ ಕೀಳುಮಟ್ಟದ ಪದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಕೆಲಸದಿಂದ ಅಮಾನತು ಮಾಡುವುದಾಗಿ ಬೆದರಿಕೆ ಹಾಕಿದ್ದು, ಇದು ಶಿಕ್ಷಕ ವೃತ್ತಿಯ ಘನತೆಗೆ ತೀವ್ರ ಧಕ್ಕೆ ತಂದಿದೆ ಎಂದು ಡಿಎಸ್‌ಎಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಣಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಬೇಕು. ಹಾಗೂ, ಶಿಕ್ಷಕರಿಗೆ ಬೆದರಿಕೆ ಹಾಕಿರುವ ಆಡಳಿತ ಮಂಡಳಿ ಕಾರ್ಯದರ್ಶಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಡಿಎಸ್‌ಎಸ್ ತಾಲ್ಲೂಕು ಸಂಚಾಲಕ ವೈ. ಚಂದ್ರು ಗುಂಡಗತ್ತಿ , ಡಿಎಸ್‍ಎಸ್‍ ( ಭೀಮವಾದ) ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ್,  ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಮ್ಮ, ಯಡಿಹಳ್ಳಿ ಅಂಜಿನಿ, ಶಶಿಕುಮಾರ, ಮಾರುತಿ, ಸುರೇಶ್, ದೇವರಾಜ್, ಸುನೀಲ ಮತ್ತಿಹಳ್ಳಿ, ಮಂಜುನಾಥ, ಪಕ್ಕೀರಪ್ಪ ಹುಲಿಕಟ್ಟೆ, ಬಸವರಾಜ್, ಉಚ್ಚೆಂಗೆಪ್ಪ, ಮಾರುತಿ, ಪ್ರಕಾಶ್ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
SOGI
Homeಕಲೆಸುದ್ದಿಗಳು

ಸೋಗಿಯಲ್ಲಿ ವಿಜೃಂಭಿಸಿದ ಜಾನಪದ ಸೊಬಗು

ಹೂವಿನಹಡಗಲಿ : ತಾಲ್ಲೂಕಿನ ಸೋಗಿ ಗ್ರಾಮದಲ್ಲಿ  ವಿಜಯನಗರ ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರ ಅನುದಾನದಡಿ,...

Homeಸುದ್ದಿಗಳು

“ಶ್ರಮಿಕನಿಂದ ಧ್ವಜಾರೋಹಣ”

ಹರಪನಹಳ್ಳಿ : ಪಟ್ಟಣದ ಹೊರ ಹೊಲದಲ್ಲಿರುವ ಪ್ರಕೃತಿ ವಿದ್ಯಾ ಸಂಸ್ಥೆಯ ಪರ್ಲ್ ಪಬ್ಲಿಕ್ ಶಾಲೆಯಲ್ಲಿ 80ನೇ...

Homeಸುದ್ದಿಗಳು

ವ್ಯಕ್ತಿ ಕಾಣೆ ಪತ್ತೆಗೆ ಮನವಿ

ವಿಜಯನಗರ : ತಾಲೂಕಿನ ಚಿತ್ರಕೇರಿ 34ನೇ ವಾರ್ಡ್ ನಿವಾಸಿ ಎಸ್. ಉಮೇಶ ತಂದೆ ಲೇಟ್ ಸೋಮಣ್ಣ...

Homeಸುದ್ದಿಗಳು

ಹರಪನಹಳ್ಳಿಯಲ್ಲಿ ಬಿಜೆಪಿ ವತಿಯಿಂದ ವಿಜೃಂಭಣೆಯ ‘ಹರ್ ಘರ್ ತಿರಂಗ’ ಬೈಕ್ ರ್ಯಾಲಿ

ಹರಪನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ನಗರದಲ್ಲಿ ಶುಕ್ರವಾರ ಭಾರತೀಯ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.