ಹರಪನಹಳ್ಳಿ : ಇಲ್ಲಿಯ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಾಹಣ ಕಾಮಾಗಾರಿ ಕೈಗೆತ್ತಿಕೊಂಡಿರುವುದರಿಂದ ಆ.28ರ ಶುಕ್ರವಾರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹರಪನಹಳ್ಳಿ ನಗರ, ಕೂಲಹಳ್ಳಿ, ಅಡವಿಹಳ್ಳಿ, ನಂದಿಬೇವೂರು, ಬಾಗಳಿ, ಮಾಡಲಗೇರೆ, ಹಾರಕನಾಳು, ತೊಗರಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ವಿದ್ಯತ್ ಪೂರೈಕೆ ಇರುವುದಿಲ್ಲ ಎಂದು ಪ್ರಕಟಣೆ ಬೆಸ್ಕಾಂ ಎಇಇ ಪ್ರಕಾಶ ಪತ್ತೆನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment