Home ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

Share
Share

ವಿಜಯನಗರ : ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಕೇಂದ್ರ ಪುರಸ್ಕೃತ ಮಿಷನ್ ಶಕ್ತಿ ಯೋಜನೆಯಡಿ 32 ಅಂಗನವಾಡಿ ಕಂ ಕ್ರಷ್ ಕೇಂದ್ರಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ 32 ಅಂಗನವಾಡಿ ಕಾರ್ಯಕರ್ತೆ ಹಾಗೂ 32 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 28 ಕೊನೆಯ ದಿನವಾಗಿದೆ.

ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಸಂಬಂದಿತ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.