Home ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಅಹ್ವಾನ
Homeಸುದ್ದಿಗಳು

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಅಹ್ವಾನ

Share
Share

ವಿಜಯನಗರ : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ.

ಶಿಕ್ಷಣ ಸೌಲಭ್ಯಕ್ಕಾಗಿ ಅರಿವು ಶೈಕ್ಷಣಿಕ ಸಾಲ ಯೋಜನೆ ಮತ್ತು ವಿದೇಶ ವ್ಯಾಸಂಗ ಸಾಲ ಯೋಜನೆಯಾಗಿದ್ದು, ಸ್ವಯಂ ಉದ್ಯೋಗ & ಆರ್ಥಿಕ ಸಬಲೀಕರಣಕ್ಕಾಗಿ ಸ್ವಾವಲಂಬಿ ಸಾರಥಿ, ಶ್ರಮಶಕ್ತಿ ಸಾಲ, ವೃತ್ತಿ ಪ್ರೋತ್ಸಾಹ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, ನವೋದಯ ಯೋಜನೆ, ಫಾಸ್ಟ್ ಫುಡ್ ಟ್ರಕ್, ಟ್ರೈಲರ್ ಫುಡ್ (ಕಿಯೋಸ್ಕ್) ಯೋಜನೆ, ವ್ಯಾಪಾರ, ಉದ್ದಿಮೆ ನೇರಸಾಲ ಹಾಗೂ ಸಿಖ್ಖಲಿಗಾರ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ. ಕೃಷಿ ಮತ್ತು ಸಮುದಾಯ ಯೋಜನೆಗಳಿಗಾಗಿ ಗಂಗಾಕಲ್ಯಾಣ ಯೋಜನೆ, ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ, ವಿವಿಧ ವೃತ್ತಿಪರ ತರಬೇತಿ ಯೋಜನೆ ಮತ್ತು ಸಾಂತ್ವಾನ ಯೋಜನೆ ಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಜಿಲ್ಲೆಯಲ್ಲಿ ಕನಿಷ್ಠ 15 ವರ್ಷಗಳ ಖಾಯಂ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.4,50,000 ಮೀರಿರಬಾರದು. 18 ರಿಂದ 55 ವರ್ಷ ಒಳಗಿರಬೇಕು. ಶೇ. 33 ರಷ್ಟು ಮಹಿಳೆಯರಿಗೆ ಹಾಗೂ ಶೇ. 3 ರಷ್ಟು ವಿಶೇಷಚೇತನರಿಗೆ ಮೀಸಲಾತಿ ನಿಗದಿಪಡಿಸಲಾಗಿದೆ. ಈ ಹಿಂದೆ ನಿಗಮದ ಸೌಲಭ್ಯ ಪಡೆದವರು ಮತ್ತೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಇಲಾಖೆ ಅಧಿಕೃತ ಜಾಲಾತಣ: ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), 1ನೇ ಮಹಡಿ, ಮೌಲಾನ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ, ಬಳ್ಳಾರಿ ದೂರವಾಣಿ ಸಂಖ್ಯೆ: 08392-294370 ಗೆ ಸಂಪಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.