Home ಪ್ರಜಾಸೇವಾ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಲಿ – ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ
Homeಸುದ್ದಿಗಳು

ಪ್ರಜಾಸೇವಾ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಲಿ – ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

Share
Share

ವಿಜಯನಗರ  : ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಸೆಪ್ಟೆಂಬರ್ 5 ರಂದು ಆಯೋಜಿಸಲಾಗಿರುವ ‘ಬಾಗಿಲಿಗೆ ಬಂತು ಸರ್ಕಾರ’ ಹಾಗೂ ‘ಪ್ರಜಾಸೇವಾ ಅಭಿಯಾನ’ ಕಾರ್ಯಕ್ರಮವನ್ನು ರಾಜ್ಯಕ್ಕೇ ಮಾದರಿಯಾಗುವಂತೆ ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಪೂರ್ಣ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪ್ರಜಾಸೇವಾ ಅಭಿಯಾನ ರಾಜ್ಯಕ್ಕೆ ಸಮರ್ಪಣೆ ಮಾಡುವ ಹಾಗೂ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಜರುಗಿದ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರ ದೂರುಗಳು, ಮನವಿಗಳು ಹಾಗೂ ಕುಂದುಕೊರತೆ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಸ್ಥಳದಲ್ಲೇ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ‘ಪ್ರಜಾಸೇವಾ’ ಅಭಿಯಾನದ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಕೂಡ್ಲಿಗಿ ತಾಲೂಕಿನಲ್ಲಿ ಆಯೋಜಿಸಲಾಗಿದೆ. ಅಂದು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಒಟ್ಟು 60 ಮಳಿಗೆಗಳನ್ನು ತೆರೆಯಲಾಗುತ್ತಿದೆ. ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಾರ್ವಜನಿಕ ಅರ್ಜಿಗಳನ್ನು ಸ್ವೀಕರಿಸಲು 30 ಕೌಂಟರ್‌ಗಳನ್ನು ಕಾಯ್ದಿರಿಸಲಾಗಿದೆ.

ಮಾನ್ಯ ಮುಖ್ಯಮಂತ್ರಿಗಳು ಸೆಪ್ಟೆಂಬರ್ 5 ರಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದು, ಸ್ಥಳದಲ್ಲೇ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು. ಕೂಡ್ಲಿಗಿ ತಾಲ್ಲೂಕು ವ್ಯಾಪ್ತಿಯಲ್ಲಿನ ಎಲ್ಲಾ ಮನೆಗಳಿವೆ. ಈ ಎಲ್ಲಾ ಮನೆಗಳಿಗೆ ಮುಖ್ಯಮಂತ್ರಿಗಳ ಸಂದೇಶ ಪತ್ರ ಹಾಗೂ ಆಹ್ವಾನ ಪತ್ರಿಕೆ ಮತ್ತು ಸ್ವೀಕೃತಿ ಪತ್ರವನ್ನು ತಲುಪಿಸಲು ಕ್ರಮ ವಹಿಸಲಾಗಿದೆ.

ಮುಖ್ಯಮಂತ್ರಿಗಳ ಸಂದೇಶ ಹಾಗೂ ಕುಂದು ಕೊರತೆಗಳ ಆಹ್ವಾನ ಪತ್ರಿಕೆಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಕಂದಾಯ ಇಲಾಖೆ ಹೀಗೆ ವಿವಿಧ ಇಲಾಖೆಗಳ ಕುಂದು ಕೊಸೇರಿದಂತೆ ವಿವಿಧ ಪಿಂಚಣಿ ಯೋಜನೆಗಳ ಕುರಿತು ಪಟ್ಟಿ ನೀಡಲಾಗಿದೆ. ಸಾರ್ವಜನಿಕರು ತಮ್ಮ ಅಗತ್ಯತೆಗಳಿಗೆ ತಕ್ಕಂತೆ ಭರ್ತಿ ಮಾಡಿ ಸೆಪ್ಟೆಂಬರ್ 5 ರಂದು ಬೆಳಗ್ಗೆ 9 ಗಂಟೆಯೊಳಗೆ ನೊಂದಣಿ ಮಾಡಿಕೊಳ್ಳಬಹುದಾಗಿದೆ.

ಸಾರ್ವಜನಿಕರು ನೀಡುವ ಅರ್ಜಿಗಳನ್ನು ಸ್ಥಳದಲ್ಲೇ ಡಿಜಿಟಲ್ ಹಾಗೂ ತಾಂತ್ರಿಕ ವ್ಯವಸ್ಥೆಯ ಮೂಲಕ ವಿಂಗಡಿಸಿ ತಕ್ಷಣವೇ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಮತ್ತು ತಾಲೂಕು ಮಟ್ಟದ ಸಿಬ್ಬಂದಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ವಿವಿಧ ಇಲಾಖೆಗಳ ಆಪರೇಟರ್‌ಗಳು ಮತ್ತು ಅಧಿಕಾರಿಗಳು ಕೌಂಟರ್‌ಗಳಲ್ಲಿ ಲಭ್ಯವಿರಲಿದ್ದು, ಸಾರ್ವಜನಿಕರ ಅರ್ಜಿಗಳಿಗೆ ತಕ್ಷಣ ಸ್ಪಂದಿಸಲಿದ್ದಾರೆ. ಸ್ಥಳದಲ್ಲಿಯೇ ಪರಿಹಾರ ಸಿಗುವಂತಿದ್ದರೆ, ತಕ್ಷಣ ಬಗೆಹರಿಸಬಹುದಾದ ಕುಂದುಕೊರತೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಗುತ್ತದೆ. ಅಗತ್ಯ ಬಿದ್ದಲ್ಲಿ ಅರ್ಹ ಅರ್ಜಿದಾರರೊಂದಿಗೆ ಮುಖ್ಯಮಂತ್ರಿಗಳು ನೇರವಾಗಿ ಸಂವಾದ ನಡೆಸಲು ಅವಕಾಶ ಕಲ್ಪಿಸುವ ಸಾಧ್ಯತೆಯಿದೆ ಎಂದರು.

ವಿವಿಧ ಇಲಾಖೆಗಳಿಂದ 30 ಪ್ರದರ್ಶನ ಸ್ಟಾಲ್: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಮತ್ತು ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಅರಣ್ಯ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ಸಾಧನೆ ಮತ್ತು ಯೋಜನೆಗಳ ಕುರಿತು ಮಾಹಿತಿ ನೀಡಲು ಒಟ್ಟು 30 ಪ್ರದರ್ಶನ ಮಳಿಗೆಗಳನ್ನು ಹಾಕಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬಹುದು ಎಂದ ಅವರು, ತಾಲೂಕಿನ ವಸತಿ ನಿಲಯಗಳು, ಅಂಗನವಾಡಿಗಳು, ಶಾಲೆಗಳು ಮತ್ತು ಕುಡಿಯುವ ನೀರಿನ ಪ್ರದೇಶಗಳಲ್ಲಿ ಸಂಪೂರ್ಣ ನೈರ್ಮಲ್ಯ ಕಾಯ್ದುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ಯಾವುದೇ ಅಡೆತಡೆ ಇಲ್ಲದೆ ಸುಲಭವಾಗಿ ತಲುಪುವಂತೆ ಮಾಡಲು ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ವಿವೇಕಾನಂದ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.