Home ಮಹಿಳೆಯರಿಗೆ ಟೈಲರಿಂಗ್ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
Homeಸುದ್ದಿಗಳು

ಮಹಿಳೆಯರಿಗೆ ಟೈಲರಿಂಗ್ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

Share
Share

ದಾವಣಗೆರೆ :   ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಮಹಿಳೆಯರಿಗೆ ಟೈಲರಿಂಗ್ ತರಬೇತಿ ಕುರಿತು 31 ದಿನಗಳ ಉಚಿತ ತರಬೇತಿಯನ್ನು  ಸೆ.17 ರಿಂದ ಹಮ್ಮಿಕೊಳ್ಳಲಾಗಿದೆ.

ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು.   ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.  ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9241482541, 9481506564 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಗಿರಿಧರ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.