Home ಉಚಿತ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಗಾರ
Homeಸುದ್ದಿಗಳು

ಉಚಿತ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಗಾರ

Share
Share

ವಿಜಯನಗ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಇವರ ಪ್ರಾಯೋಜಕತ್ವದಲ್ಲಿ ಉದ್ಯಮ ಸ್ಥಾಪಿಸಲು ಇಚ್ಛಿಸುವವರಿಗೆ ಸೆಪ್ಟೆಂಬರ್ 3 ಜಿಲ್ಲೆಯ ಹೊಸಪೇಟೆಯಲ್ಲಿ ಒಂದು ದಿನದ ಉಚಿತ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲಾದೆ.

ತರಬೇತಿ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಕರಿಸಬೇಕಾದ ಕ್ರಮ, ಉದ್ಯಮ ಸ್ಥಾಪನೆಗೆ ಅಗತ್ಯ ಕ್ರಮಗಳು, ಆಸಕ್ತರಿಗೆ ಪ್ರೇರೇಪಣೆ, ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು ಮತ್ತು ಪ್ರೋತ್ಸಾಹ, ಸರ್ಕಾರದ ಸ್ವಯಂ ಉದ್ಯೋಗ ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುವುದು. ಜೊತೆಗೆ ಬ್ಯಾಂಕಿಂಗ್ ವ್ಯವಹಾರಗಳು, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಉದ್ಯಮ ನಿರ್ವಹಣೆ ವಿಧಾನಗಳು, ಉದ್ಯಮ ಪ್ರಾರಂಭದ ಹಂತಗಳು, ಸಾಲ ಸೌಲಭ್ಯಗಳು ಹಾಗೂ ಜಾಹೀರಾತು ಮತ್ತು ಮಾರುಕಟ್ಟೆ ತಂತ್ರಗಳ ಕುರಿತು ತಜ್ಞರಿಂದ ಮಾರ್ಗದರ್ಶನ ನೀಡಲಾಗುತ್ತದೆ.

ಆಸಕ್ತ 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಓದಲು ಬರೆಯಲು ಬರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ : 9449226221 ಗೆ ಸಂಪರ್ಕಿಸಬಹುದು ಎಂದು ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.