ವಿಜಯನಗರ : ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಸೆಪ್ಟೆಂಬರ್ 4 ರಂದು ಸಂಜೆ 6 ಗಂಟೆಗೆ ಹೊಸಪೇಟೆಯ ಹಂಪಿ ವಿವಿಯ ಹೆಲಿಪ್ಯಾಡ್ಗೆ ಆಗಮಿಸಿ ಹೊಸಪೇಟೆಯಲ್ಲಿ ವಾಸ್ತವ್ಯ ಹೂಡುವರು. ಸೆಪ್ಟೆಂಬರ್ 5 ರಂದು ಬೆಳಗ್ಗೆ 10 ಗಂಟೆಗೆ ಹಂಪಿ ವಿವಿಯ ಹೆಲಿಪ್ಯಾಡ್ನಿಂದ ಕೂಡ್ಲಿಗಿ ತಲುಪಿ ಗುಡೆಕೋಟೆ ರಸ್ತೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಪ್ರಜಾಸೇವಾ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕಾರ್ಯಕ್ರಮದ ನಂತರ ಮಧ್ಯಾಹ್ನ 2.30ಕ್ಕೆ ಕೂಡ್ಲಿಗಿಯಿಂದ ಹೆಲಿಪ್ಯಾಡ್ ಮೂಲಕ ಜಿಂದಾಲ್ ವಿಮಾನ ನಿಲ್ದಾಣ ತಲುಪಿ, ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
Leave a comment