ವಿಜಯನಗರ : ಮುಂಬರುವ ಗೌರಿ ಗಣೇಶ ಹಬ್ಬದ ಮೆರವಣಿಗೆಗಳ ವೇಳೆಯಲ್ಲಿ ಸಾರ್ವಜನಿಕ ಶಾಂತಿ, ಆರೋಗ್ಯ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಸಿಸ್ಟಮ್ಗಳು ಹಾಗೂ ಹೆಚ್ಚಿನ ಡೆಸಿಬಲ್ ಶಬ್ದ ಉಂಟುಮಾಡುವ ಧ್ವನಿವರ್ಧಕಗಳ ಬಳಕೆಯನ್ನು ಸೆಪ್ಟೆಂಬರ್ 14 ರಿಂದ ಸೆಪ್ಟೆಂಬರ್ 28 ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್. ಮನ್ನಿಕೇರಿ ನಿಷೇಧಿಸಿ ಆದೇಶಿಸಿದ್ದಾರೆ.
ಗಣೇಶ ಹಬ್ಬದ ಮೆರವಣಿಗೆಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅತಿಯಾದ ಡೆಸಿಬಲ್ ಉಳ್ಳ ಡಿಜೆ ವ್ಯವಸ್ಥೆಗಳು, ಲೌಡ್ ಸ್ಪೀಕರ್ಗಳು ಹಾಗೂ ಶಬ್ದ ವರ್ಧಕ ಸಾಧನಗಳ ಅತಿಯಾದ ಬಳಕೆಯಿಂದ ಸಾರ್ವಜನಿಕರ ಮಾನಸಿಕ ಹಾಗೂ ಶಾರೀರಿಕ ಆರೋಗ್ಯ, ಜೀವಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವುದನ್ನು ತಡೆಯಲು ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆ 1963, ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆ – 2000 ಹಾಗೂ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ, 2023 ರ ಕಲಂ 163 ರಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
Leave a comment