Home ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

Share
Share

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್ ಬದರ್ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ, ಕಲಬುರಗಿ ಹಾಗೂ ಸೇಂಟ್ ಮೇರಿಸ್ ಶಾಲೆಯ ಸಹಯೋಗದಲ್ಲಿ ಇಂದು ಉಚಿತ ದಂತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಶಾಲೆಯ ವ್ಯವಸ್ಥಾಪಕರಾದ ಫಾ. ಸ್ಟೀವನ್ ಅವರು ದಂತ ವೈದ್ಯಕೀಯ ತಂಡದೊಂದಿಗೆ ಸಸಿಗೆ ನೀರು ಹಾಕಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಲ್ ಬದರ್ ದಂತ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಹಲ್ಲುಗಳ ಸ್ವಚ್ಛತೆ, ಹಲ್ಲುಗಳನ್ನು ಸರಿಯಾಗಿ ಸಂರಕ್ಷಿಸುವ ವಿಧಾನ ಹಾಗೂ ಬಾಯಿಯ ಆರೋಗ್ಯದ ಮಹತ್ವದ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು. ನಮ್ಮ ಹಲ್ಲುಗಳು ದೇವರು ಕೊಟ್ಟ ಅಮೂಲ್ಯವಾದ ಕೊಡುಗೆಗಳು.

ಅವು ನಮಗೆ ಆಹಾರವನ್ನು ಅಗಿಯಲು, ಮಾತನಾಡಲು ಮತ್ತು ಸುಂದರವಾಗಿ ನಗಲು ಸಹಾಯ ಮಾಡುತ್ತವೆ. ಆದ್ದರಿಂದ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ: ದಿನಕ್ಕೆ ಎರಡು ಬಾರಿ ಹಲ್ಲುಜ್ಜಿರಿ — ಬೆಳಿಗ್ಗೆ ಮತ್ತು ರಾತ್ರಿ. ಚಾಕೊಲೇಟ್, ಸಿಹಿತಿಂಡಿ ಮತ್ತು ಸಕ್ಕರೆ ಪಾನೀಯಗಳನ್ನು ಅತಿಯಾಗಿ ಸೇವಿಸಬೇಡಿ. ಊಟದ ನಂತರ ಬಾಯಿಯನ್ನು ಚೆನ್ನಾಗಿ ಮುಕ್ಕಳಿಸಿರಿ. ಹಲ್ಲುಗಳಿಂದ ಗಟ್ಟಿಯಾದ ವಸ್ತುಗಳನ್ನು ತೆರೆಯಲು ಪ್ರಯತ್ನಿಸಬೇಡಿ.

ಹಲ್ಲಿನಲ್ಲಿ ನೋವು ಅಥವಾ ಸಮಸ್ಯೆ ಕಂಡುಬಂದರೆ ತಕ್ಷಣ ದಂತವೈದ್ಯರನ್ನು ಸಂಪರ್ಕಿಸಿರಿ. ಆರೋಗ್ಯಕರ ಹಲ್ಲುಗಳು ಸುಂದರ ನಗುವಿನ ಆಧಾರ. ನೀವು ಆರೋಗ್ಯವಾಗಿದ್ದರೆ ನಿಮ್ಮ ಓದು, ಆಟ ಮತ್ತು ಜೀವನವೂ ಸಂತೋಷದಿಂದ ಕೂಡಿರುತ್ತದೆ. ಎಂದು ಸಲಹೆ ನೀಡಿದರು. ಶಿಬಿರದಲ್ಲಿ ಒಟ್ಟು 731 ಜನರು ದಂತ ತಪಾಸಣೆಗೆ ಒಳಗಾದರು.

ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು. ಈ ಸಂದರ್ಭದಲ್ಲಿ ಫಾ. ವಿಲಿಯಂ ಮಿರಾಂದ OCD, ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ನತಾಲಿಯ, ಡಾ. ಅಬ್ದುಲ್ಲಾ, ಸಯೀದಾ ಮದಿಹಾ, ಆಯಿಷಾ ನೂರೈನ್, ಅಝೀಲಾ, ಸನಾ, ಸಾನಿಯಾ, ಅಲ್ ಬದರ್ ದಂತ ಆಸ್ಪತ್ರೆಯ ವೈದ್ಯಕೀಯ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Homeಸುದ್ದಿಗಳು

ಗೌರಿ ಗಣೇಶ ಹಬ್ಬದ  ಮೆರವಣಿಗೆಗೆ ಡಿಜೆ  ನಿಷೇಧ : ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ವಿಜಯನಗರ : ಮುಂಬರುವ ಗೌರಿ ಗಣೇಶ ಹಬ್ಬದ  ಮೆರವಣಿಗೆಗಳ ವೇಳೆಯಲ್ಲಿ ಸಾರ್ವಜನಿಕ ಶಾಂತಿ, ಆರೋಗ್ಯ ಮತ್ತು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.