Home ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್
Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

Share
Share

ಹರಪನಹಳ್ಳಿ : ‘ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು’ ಎಂದು ಪ್ರಾಂಶುಪಾಲ ಡಾ.ಎಂ ಸುರೇಶ್ ಹೇಳಿದರು.

ತಾಲೂಕಿನ ಅರಸೀಕೆರೆ ಗ್ರಾಮದ ವಾಲ್ಮೀಕಿ ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಧಾರ್ಮಿಕ ಆಚರಣೆ,  ತ್ಯಾಗ, ಭಕ್ತಿ, ಪ್ರೀತಿಯಿಂದ ಸಹಬಾಳ್ವೆ ನಡೆಸಿದರೆ ಕಷ್ಟಕಾಲದಲ್ಲಿ ಮನುಷ್ಯನಿಗೆ  ವಜ್ರ ಕವಚದಂತೆ ರಕ್ಷಣೆ ಒದಗಿಸುತ್ತದೆ. ಈ ಧಾರ್ಮಿಕ ಪರಂಪರೆಯನ್ನು ಭವಿಷ್ಯದ ಪೀಳಿಗೆಗೂ ಕೊಂಡೊಯ್ಯಬೇಕು ಎಂದರು.

ಮುಖಂಡ ಐ.ಸಲಾಂ ಸಾಬ್ ಮಾತನಾಡಿ, ‘ ಗ್ರಾಮದಲ್ಲಿ ಆಚರಿಸುವ ಪ್ರತಿಯೊಂದು ಹಬ್ಬವು ವಿಶೇಷ ಎನಿಸಿದೆ. ಜಾತಿವ್ಯವಸ್ಥೆಯೂ ಮೀರಿ ಹಬ್ಬವನ್ನು ಸರ್ವಧರ್ಮದವರು ಆಚರಿಸುತ್ತೇವೆ. ಇದು ಇತರರಿಗೂ ಮಾದರಿಯಾಗಲಿ ಎಂದರು.

ಗಣೇಶ ಹಬ್ಬದ ಪ್ರಯುಕ್ತ ಗ್ರಾಮದಲ್ಲಿ ಐದು ದಿನಗಳ ಕಾಲ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳು, ದಾಸೋಹ ನಡೆದವು. ರಂಗೋಲಿ ಸ್ಪರ್ಧೆ, ಚಿತ್ರಕಲೆ, ಓಟದ ಸ್ಪರ್ಧೆ, ಮ್ಯೂಸಿಕಲ್ ಚೇರ್ ಸ್ಪರ್ಧೆಗಳು ನಡೆದವು.

ಈ ಸಂದರ್ಭದಲ್ಲಿ ಕೆ.ಮಹಾಂತೇಶ್, ಮಂಜಪ್ಪ, ರಂಗಪ್ಪ, ಡಿ.ಹನುಮಂತಪ್ಪ, ಅಡ್ಡಿ ಚನ್ನವೀರಪ್ಪ, ಕೊಟ್ರೇಶ್, ಹಾಲೇಶ್, ಪರಸಪ್ಪ, ಸಂತೋಷ, ಮಾರುತಿ, ಪ್ರದೀಪ, ಸುಧಾಕರ್ ಸೇರಿದಂತೆ ಊರಿನ ಮುಖಂಡರು, ಇತರರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ವಿಮೋಚನಾ ಹೋರಾಟದ ಇತಿಹಾಸವನ್ನು ಇಂದಿನ ಪೀಳಿಗೆಗೆ ತಲುಪಿಸಿ: ಸಿ. ಹಾಲೇಶ್

ಹರಪನಹಳ್ಳಿ: ದೇಶಕ್ಕೆ ಸ್ವಾತಂತ್ರ್ಯ ದೊರೆತ ಬಳಿಕವೂ ಹೈದರಾಬಾದ್ ನಿಜಾಮರು ಮತ್ತು ರಜಾಕಾರರ ದಬ್ಬಾಳಿಕೆಗೆ ಕಲ್ಯಾಣ ಕರ್ನಾಟಕ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.