Home ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 
Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

Share
Share

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ ಮಾಡಿದ್ದ ಆರೋಪಿಗೆ ವಿಜಯನಗರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ಹಾಗೂ ₹65,000 ದಂಡ ವಿಧಿಸಿ ತೀರ್ಪು ನೀಡಿದೆ.

ಕಮಲಾಪುರದ ಗೋಶಾಲೆ ಕೇರಿಯ ನಿವಾಸಿ ಬೋವಿ ಜನಾಂಗದ ಓಂಕಾರೇಶ (24) ಶಿಕ್ಷೆಗೆ ಗುರಿಯಾದ ಆರೋಪಿ.  ಪ್ರಕರಣದ ವಿವರ: ದಿನಾಂಕ 22-10-2024 ರಂದು ಬೆಳಿಗ್ಗೆ 9.30ರ ಸುಮಾರಿಗೆ ‘ಅಭಿ’ ಎಂಬ 7 ವರ್ಷದ ಬಾಲಕನನ್ನು ಶಾಲೆಗೆ ಬಿಟ್ಟು ಬರುವುದಾಗಿ ನಂಬಿಸಿ ಆರೋಪಿ ಓಂಕಾರೇಶ ತನ್ನ ಸ್ಕೂಟಿಯಲ್ಲಿ ಕರೆದುಕೊಂಡು ಹೋಗಿದ್ದ. ಬ್ಯಾಗ್ ಶಾಲೆಯಲ್ಲೇ ಇಟ್ಟು ಬರುವಂತೆ ತಿಳಿಸಿ, ಮಗುವನ್ನು ಕಮಲಾಪುರದ ಗಾರೆಬಾವಿ ಆಂಜನೇಯ ದೇವಾಲಯದ ಮುಂಭಾಗದಲ್ಲಿದ್ದ ಕಾಲುವೆ ಸೇತುವೆ ಮೇಲಿಂದ ಹರಿಯುವ ನೀರಿಗೆ ಎಸೆದು ಕೊಲೆ ಮಾಡಿದ್ದ.

ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 80/2026 ರಲ್ಲಿ BNS 2023 ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.  ಹಂಪಿ ವೃತ್ತದ ಸಿಪಿಐ ರಾಜೇಶ ಬಟಗುರ್ಕಿ ಹಾಗೂ ಅವರ ತನಿಖಾ ತಂಡವು ನಿಖರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಆರೋಪದ ಮೇಲಿನ ಸಾಕ್ಷ್ಯಾಧಾರಗಳು ಸಾಬೀತಾದ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶೇಖರಪ್ಪ (ಶಾಲಿಗನೂರು) ವಾದ ಮಂಡಿಸಿದ್ದರು. ಯಶಸ್ವಿ ತನಿಖೆ ನಡೆಸಿ ಸಾಕ್ಷಿಗಳನ್ನು ಸರಿಯಾದ ಸಮಯಕ್ಕೆ ಹಾಜರುಪಡಿಸಿದ ತನಿಖಾ ತಂಡ ಹಾಗೂ ಸಿಬ್ಬಂದಿಯ ಕಾರ್ಯವನ್ನು ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿದ್ದಾರೆ.

ಆರೋಪಿತನ ವಿರುದ್ದ ದೋಷಾರೋಪಣ ಪತ್ರವನ್ನು ಸಲ್ಲಿಸಿದ ತನಿಖಾಧಿಕಾರಿ ಸಿಪಿಐ ರಾಜೇಶ ಬಟಗುರ್ಕಿ, ಜಿ.ತಿಪ್ಪೆಸ್ವಾಮಿ, ಸಂತೋಷ ಡಬ್ಬಿನ್, ಕರಿಬಸಜ್ಜ, ಹೆಚ್.ಸಿ.ಉಮೇಶ, ಮಹಾಂತೇಶ, ಈರಣ್ಣ, ವಿವೇಕಾನಂದ, ಗುರುಬಸವರಾಜ, ಬಸವರಾಜ ಮೇಟಿ ಹಾಗೂ ಸಾಕ್ಷಿಗಳನ್ನು ಸರಿಯಾದ ಸಮಯಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ನ್ಯಾಯಾಲಯದ ಸಿಬ್ಬಂದಿಗಳಾದ ಮಹ್ಮದ್ ಜಮೀರ್, ವಿಜಯಕುಮಾರ ಅವರ ಕಾರ್ಯವನ್ನು ಎಸ್ಪಿ ಜಾಹ್ನವಿ ಎಸ್‍ ಅವರು ಪ್ರಶಂಸಿದ್ದಾರೆ

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Homeಸುದ್ದಿಗಳು

ವಿಮೋಚನಾ ಹೋರಾಟದ ಇತಿಹಾಸವನ್ನು ಇಂದಿನ ಪೀಳಿಗೆಗೆ ತಲುಪಿಸಿ: ಸಿ. ಹಾಲೇಶ್

ಹರಪನಹಳ್ಳಿ: ದೇಶಕ್ಕೆ ಸ್ವಾತಂತ್ರ್ಯ ದೊರೆತ ಬಳಿಕವೂ ಹೈದರಾಬಾದ್ ನಿಜಾಮರು ಮತ್ತು ರಜಾಕಾರರ ದಬ್ಬಾಳಿಕೆಗೆ ಕಲ್ಯಾಣ ಕರ್ನಾಟಕ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.