Home ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಆಯುರ್ವೇದದ ಪಾತ್ರ ಮಹತ್ವದ್ದು: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ
Home

ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಆಯುರ್ವೇದದ ಪಾತ್ರ ಮಹತ್ವದ್ದು: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

Share
Share

ವಿಜಯನಗರ : ಆರೋಗ್ಯಕರ ಹಾಗೂ ಸದೃಢ ಸಮಾಜ ನಿರ್ಮಾಣದಲ್ಲಿ ಆಯುರ್ವೇದ ವೈದ್ಯ ಪದ್ಧತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು. ನಗರದ ಬ್ರಹ್ಮಕುಮಾರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಯುರ್ವೇದವು ಅತ್ಯಂತ ಪುರಾತನ ಹಾಗೂ ವೈಜ್ಞಾನಿಕ ವೈದ್ಯ ಪದ್ಧತಿಯಾಗಿದ್ದು, ಅದರ ಸಿದ್ಧಾಂತಗಳು ಹಾಗೂ ನಿಯಮಗಳನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿಶೇಷವಾಗಿ ಆಶಾ ಕಾರ್ಯಕರ್ತೆಯರು ಆಯುರ್ವೇದದ ಆರೋಗ್ಯಪರ ಸಿದ್ಧಾಂತಗಳನ್ನು ಅರಿತು, ಅವುಗಳನ್ನು ಜನರಿಗೆ ತಲುಪಿಸುವ ಮೂಲಕ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು.

ಜನರಲ್ಲಿ ಆರೋಗ್ಯದ ಕುರಿತು ಜಾಗೃತಿ ಮೂಡಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದ್ದು, ಆಯುರ್ವೇದದ ಜೀವನಶೈಲಿ ಹಾಗೂ ಆರೋಗ್ಯ ಸಂರಕ್ಷಣೆಯ ವಿಧಾನಗಳನ್ನು ಜನರಿಗೆ ತಿಳಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಧಿಕಾ ಮಾತನಾಡಿ, ಆಯುರ್ವೇದ ಚಿಕಿತ್ಸಾ ಪದ್ಧತಿಯು ಪರಿಣಾಮಕಾರಿಯಾಗಿದ್ದು, ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳಲ್ಲಿ ಸೂಕ್ತ ಮಾರ್ಗದರ್ಶನ ಹಾಗೂ ಚಿಕಿತ್ಸೆಯ ಮೂಲಕ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸುಮಾರು 100 ಆಶಾ ಕಾರ್ಯಕರ್ತೆಯರಿಗೆ ಗರ್ಭಸಂಸ್ಕಾರ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವೈದ್ಯರಾದ ಡಾ. ರಾಧಾ ಬಿ.ಕೆ. ಅವರು ಗರ್ಭಸಂಸ್ಕಾರದ ಮಹತ್ವ ಹಾಗೂ ಅನುಸರಿಸಬೇಕಾದ ಕ್ರಮಗಳ ಕುರಿತು ತರಬೇತಿ ನೀಡಿದರು. ಸಂಪನ್ಮೂಲ ವೈದ್ಯರಾದ ಡಾ. ಹಾಲಮ್ಮ ಅವರು ಜೀವನಶೈಲಿಯಲ್ಲಿ ಆಯುರ್ವೇದದ ಮಹತ್ವ, ದಿನಚರ್ಯೆ, ಋತುಚರ್ಯೆ ಹಾಗೂ ಸದ್ವೃತ್ತದ ಕುರಿತು ಮಾಹಿತಿ ನೀಡಿದರು.

ಡಾ. ಶಿವಕುಮಾರ್ ಅವರು ಆರೋಗ್ಯಕರ ಜೀವನಕ್ಕಾಗಿ ಪಂಚಕರ್ಮದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಡಾ. ಶಿವಶರಣಯ್ಯ, ಡಾ.ಪಸಿಂಗ್ ರಾಥೋಡ್, ನಾಗರಾಜ್ ಕೌಲಗಿ ಡಾ. ಪ್ರಕಾಶ್ ತಿಗರಿ ಡಾ.ಪ್ರಸಾದ ಬಾಬು ಡಾ. ಹೇಮಲತಾ, ಡಾ. ಸರಸ್ವತಿ ಡಾ. ಬಾಬು ಸಾಹೇಬ್ ಜಂಗ್ಲಪ್ಪನವರ್, ಡಾ. ಪ್ರಶಾಂತ್ ಜೆ ಡಾ. ಕೆ.ಎಚ್. ಗುರುಬಸವರಾಜ್ ಸೇರಿದಂತೆ ಆಯುಷ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅಕ್ಟೋಬರ್ 2 ಮತ್ತು 4 ರಂದು ಕೆಇಎ ನೇಮಕಾತಿ ಪರೀಕ್ಷೆ: ಪಾರದರ್ಶಕತೆಗೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಸೂಚನೆ

ವಿಜಯನಗರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಕ್ಟೋಬರ್ 2 ಮತ್ತು 4 ರಂದು ನಡೆಯಲಿರುವ ಭೂ...

Homeಸುದ್ದಿಗಳು

ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ವಿಜಯನಗರ : ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21 ರಂದು ನಡೆಯಲಿರುವ ಪ್ರವರ್ತನಾ...

Homeಸುದ್ದಿಗಳು

ಎಕರೆಗೆ 25 ಸಾವಿರ ಪರಿಹಾರಕ್ಕೆ ಒತ್ತಾಯ

ಹರಪನಹಳ್ಳಿ : ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ತಕ್ಷಣವೇ ಎಕರೆಗೆ...

Homeಸುದ್ದಿಗಳು

ನನ್ನೊಳಗಿನ ಮೌನದ ಮಾತು’ ಕವನ ಸಂಕಲನ

ಹರಪನಹಳ್ಳಿ: ಇಂದಿನ ದಿನಗಳಲ್ಲಿ ಓದುಗರ ಕೊರತೆಯಿಂದಾಗಿ ಕಾವ್ಯದ ಅಭಿರುಚಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಸಂಗತಿ ಎಂದು ಸಾಹಿತಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.