ವಿಜಯನಗರ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ನವೆಂಬರ್ 6 ರಂದು ಮಧ್ಯಾಹ್ನ 1.30ಕ್ಕೆ ಹೊಸಪೇಟೆಗೆ ಆಗಮಿಸುವರು. ಅಂದು ಸಂಜೆ 4.30ಕ್ಕೆ ಹೊಸಪೇಟೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಭೆಯ ನಂತರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ರಾತ್ರಿ ವೈಕುಂಠ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡುವರು. ನವೆಂಬರ್ 7ರಂದು ಬೆಳಿಗ್ಗೆ 9.45ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
Leave a comment