Home ಹರಪನಹಳ್ಳಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ
Homeಸುದ್ದಿಗಳು

ಹರಪನಹಳ್ಳಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ

Share
DSS
Share

ಹರಪನಹಳ್ಳಿ: ನವೆಂಬರ್ 26ರಂದು ನಡೆಯುವ ಭಾರತ ಸಂವಿಧಾನ ದಿನಾಚರಣೆಯ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ತಾಲ್ಲೂಕು ಘಟಕದ ವತಿಯಿಂದ ನವೆಂಬರ್ 23ರ ಸೋಮವಾರ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 11 ಗಂಟೆಗೆ ಹೆಚ್.ಪಿ.ಎಸ್ ಪದವಿ ಕಾಲೇಜಿನ ಆವರಣದಲ್ಲಿ ಸ್ಪರ್ಧೆ ನಡೆಯಲಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ರಚನೆಯ ಕೊಡುಗೆ, ‘ಭಾರತೀಯ ಸಂವಿಧಾನದ ಮಹತ್ವ ಮತ್ತು ಆಶಯಗಳು’ ಹಾಗೂ ‘ಸಂವಿಧಾನ ಮತ್ತು ಸಾಮಾಜಿಕ ನ್ಯಾಯ’ ವಿಷಯಗಳ ಕುರಿತು ಪ್ರಬಂಧ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಹರಪನಹಳ್ಳಿಯ ಹೆಚ್.ಪಿ.ಎಸ್ ಪದವಿ ಪೂರ್ವ ಕಾಲೇಜು, ಹೆಚ್.ಪಿ.ಎಸ್ ಪದವಿ ಮಹಾವಿದ್ಯಾಲಯ, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್.ಯು.ಜೆ.ಎಂ ಪದವಿ ಪೂರ್ವ ಕಾಲೇಜು ಮತ್ತು ಎ.ಡಿ.ಬಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲು ಆಹ್ವಾನಿಸಲಾಗಿದೆ.

ಬಹುಮಾನದ ವಿವರ: ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕ್ರಮವಾಗಿ ₹5,000 (ಪ್ರಥಮ), ₹3,000 (ದ್ವಿತೀಯ) ಮತ್ತು ₹2,000 (ತೃತೀಯ) ನಗದು ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗೆ ದಲಿತ ಸಂಘರ್ಷ ಸಮಿತಿ (ಭೀಮವಾದ) ತಾಲ್ಲೂಕು ಅಧ್ಯಕ್ಷ ಕೆ. ಸುಭಾಷ್ (6361782929), ಕಾರ್ಯದರ್ಶಿ ಭರತ್ ಕೆ (9886821207) ಹಾಗೂ ಸಂಪರ್ಕ ಸಂಖ್ಯೆಗಳಾದ 9972434175, 9980720802 ಅನ್ನು ಸಂಪರ್ಕಿಸಬಹುದು ಎಂದು ಎಂದು ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ, ಮತ್ತು ಕಾರ್ಯದರ್ಶಿ ಭರತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

11 ಕಾಡು ಮೊಲಗಳ ಬೇಟೆ: ಮೂವರ ಬಂಧನ

ಬಳ್ಳಾರಿ : ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು ಬೇಟೆಯಾಡಿದ ಆರೋಪದ ಮೇರೆಗೆ...

Homeಸುದ್ದಿಗಳು

ಆಸ್ತಿ ವಿವಾದ: ಸಹೋದರನ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ: ಆಸ್ತಿ ಪಾಲು ವಿಭಾಗದ ವಿಚಾರವಾಗಿ ಉಂಟಾದ ಮನಸ್ತಾಪದಿಂದ ಸಹೋದರನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ...

bagalikanakadasa-jayanti-celebrated-at-bagali-government-school-harapanahalli
Homeಸುದ್ದಿಗಳು

ಬಾಗಳಿ ಸರ್ಕಾರಿ ಶಾಲೆಯಲ್ಲಿ ಸಡಗರದ ಕನಕದಾಸ ಜಯಂತಿ

ಹರಪನಹಳ್ಳಿ (ಬಾಗಳಿ) : ತಾಲ್ಲೂಕಿನ ಬಾಗಳಿ ಗ್ರಾಮದ ನಂದಿಬೇವೂರು ಗುರುಬಸಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

Homeಸುದ್ದಿಗಳು

ಸರ್ಕಾರಿ ಶಾಲೆಗಳ ಖಾಸಗೀಕರಣ, ವಿಲೀನ ವಿರೋಧಿಸಿ ಪ್ರತಿಭಟನೆ

ಹರಪನಹಳ್ಳಿ : ಸಾರ್ವಜನಿಕ ಶಿಕ್ಷಣ ಉಳಿಸಿ ಎಂಬ ಘೋಷವಾಕ್ಯದೊಂದಿಗೆ, ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.