Home ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
Homeಸುದ್ದಿಗಳು

ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Share
Share

ಹರಪನಹಳ್ಳಿ:ಕೇಂದ್ರ ಸರ್ಕಾರದ ರೈತ ಮತ್ತು ಕೃಷಿ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸಂಯುಕ್ತ ಕಿಸಾನ್
ಮೋರ್ಚಾ ಮತ್ತು ಅಖಿಲ ಭಾರತ ಗ್ರಾಮೀಣ ಕೃಷಿ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಮುಖಂಡ ಹುಲಿಕಟ್ಟೆ ರಹಮತ್ ವುಲ್ಲಾ ಮಾತನಾಡಿ, ಕೃಷಿಯಲ್ಲಿ ಕಾರ್ಪೊರೇಟ್ ಶೋಷಣೆ ಹೆಚ್ಚುತ್ತಿದ್ದು, ಗ್ರಾಮೀಣ ಭಾರತದಲ್ಲಿ ಕೃಷಿ ಕಾರ್ಮಿಕರಿಗೆ ಉದ್ಯೋಗದ ದಿನಗಳನ್ನು ಕಡಿತಗೊಳಿಸುವ ಮೂಲಕ ನಿರುದ್ಯೋಗ, ವಲಸೆ ಮತ್ತು ಬಡತನಕ್ಕೆ ದೂಡಲಾಗುತ್ತಿದೆ. ಉದ್ಯೋಗ ಖಾತರಿ ಚೌಕಟ್ಟನ್ನು ದುರ್ಬಲಗೊಳಿಸುವ ಮೂಲಕ ಗ್ರಾಮೀಣ ಜೀವನೋಪಾಯದ ಹಕ್ಕುಗಳ ಮೇಲೆ ನೇರ ದಾಳಿ ನಡೆಸಲಾಗುತ್ತಿದೆ ಎಂದು

ಆರೋಪಿಸಿದರು. ಬೇಡಿಕೆಗಳು : ಉದ್ಯೋಗ ಖಾತ್ರಿ ಮರುಸ್ಥಾಪಿಸಿ ಸಮರ್ಪಕ ಜಾರಿಗೊಳಿಸಬೇಕು. ಎಸ್‍ಐಆರ್‍ ರದ್ದುಗೊಳಿಸಿ, ಜ್ಞಾನೇಶ್ ಕುಮಾರ ರಾಜೀನಾಮೆ ಸಲ್ಲಿಸಬೇಕು. ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ಭೂ ರಹಿತ ಕೃಷಿ ಕಾರ್ಮಿಕರಿಗೆ ಸಾಗುವಳಿ ಚೀಟಿ ವಿತರಿಸಬೇಕು. ದಲಿತ,ಆದಿವಾಸಿ ಮತ್ತು ಮಹಿಳಾ ಕೃಷಿ ಕಾರ್ಮಿಕರ ಮೇಲಿನ ಸಾಮಾಜಿಕ ತಾರತಮ್ಯ ಮತ್ತು ದೌರ್ಜನ್ಯ ಕೊನೆಗೊಳಿಸಬೇಕು ಎಂದು ಆಗ್ರಹಿಸಿದರು. ಮುಖಂಡರಾದ ರಹಮತ್, ಕೆ. ರಾಜಪ್ಪ, ಕೆ.ನಾಗರಾಜ್, ಬಸವರಾಜ, ಸಂಜು ನಾಯ್ಕ್, ಕೆ. ಆಕಾಶ್, ನೂರಹ್ಮದ್ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

11 ಕಾಡು ಮೊಲಗಳ ಬೇಟೆ: ಮೂವರ ಬಂಧನ

ಬಳ್ಳಾರಿ : ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು ಬೇಟೆಯಾಡಿದ ಆರೋಪದ ಮೇರೆಗೆ...

Homeಸುದ್ದಿಗಳು

ಆಸ್ತಿ ವಿವಾದ: ಸಹೋದರನ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ: ಆಸ್ತಿ ಪಾಲು ವಿಭಾಗದ ವಿಚಾರವಾಗಿ ಉಂಟಾದ ಮನಸ್ತಾಪದಿಂದ ಸಹೋದರನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ...

bagalikanakadasa-jayanti-celebrated-at-bagali-government-school-harapanahalli
Homeಸುದ್ದಿಗಳು

ಬಾಗಳಿ ಸರ್ಕಾರಿ ಶಾಲೆಯಲ್ಲಿ ಸಡಗರದ ಕನಕದಾಸ ಜಯಂತಿ

ಹರಪನಹಳ್ಳಿ (ಬಾಗಳಿ) : ತಾಲ್ಲೂಕಿನ ಬಾಗಳಿ ಗ್ರಾಮದ ನಂದಿಬೇವೂರು ಗುರುಬಸಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

Homeಸುದ್ದಿಗಳು

ಸರ್ಕಾರಿ ಶಾಲೆಗಳ ಖಾಸಗೀಕರಣ, ವಿಲೀನ ವಿರೋಧಿಸಿ ಪ್ರತಿಭಟನೆ

ಹರಪನಹಳ್ಳಿ : ಸಾರ್ವಜನಿಕ ಶಿಕ್ಷಣ ಉಳಿಸಿ ಎಂಬ ಘೋಷವಾಕ್ಯದೊಂದಿಗೆ, ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.