Home ಸುದ್ದಿಗಳು ಅಭಿವೃದ್ದಿಗೆ ಕೈ ಜೋಡಿಸಿ ; ಎಂ.ಪಿ.ಲತಾ
ಸುದ್ದಿಗಳು

ಅಭಿವೃದ್ದಿಗೆ ಕೈ ಜೋಡಿಸಿ ; ಎಂ.ಪಿ.ಲತಾ

Share
HARAPANAHALLI NEW PURASABE
Share

ಹರಪನಹಳ್ಳಿ ಪುರಸಭೆ ನೂತನ ಕಟ್ಟಡಕ್ಕೆ ಚಾಲನೆ 

ಹರಪನಹಳ್ಳಿ :  ಚುನಾವಣೆ ಬಂದಾಗ ಪಕ್ಷದ ಪರವಾಗಿ ರಾಜಕೀಯ ಮಾಡೋಣ, ಫಲಿತಾಂಶ ಬಳಿಕ ಕ್ಷೇತ್ರದ ಸರ್ವಾಂಗೀಣ ಪ್ರಗತಿ ದೃಷ್ಟಿಯಿಂದ ಅಭಿವೃದ್ದಿ ಕೆಲಸಗಳಿಗೆ ಪರಸ್ಪರ ಕೈಜೋಡಿಸೋಣ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ತಿಳಿಸಿದರು.

ನಗರದ ಹಳೇ ತಹಶೀಲ್ದಾರ ಕಚೇರಿ ಆವರಣದಲ್ಲಿ ಪುರಸಭೆ 2023ನೇ ಸಾಲಿನ ಮುಖ್ಯಮಂತ್ರಿ ಅಮೃತ್ ನಗರೋತ್ಥಾನ ಯೋಜನೆ 4ನೇ ಹಂತದಡಿ ರೂ.3 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಪುರಸಭೆ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ನಗರ ಪ್ರದೇಶಕ್ಕೆ ಈಗಾಗಲೇ ರೂ.68 ಕೋಟಿ ಅನುದಾನ ಮುಂಜೂರಾಗಿದೆ. ಇನ್ನೂ ಹೆಚ್ಚಿನ ಅನುದಾನ ತಂದು ಅಭಿವೃದ್ದಿ ಕಾಮಗಾರಿ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ಪುರಸಭೆ ಈಗ ನಗರಸಭೆಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಸುಂದರ ನಗರವನ್ನಾಗಿಸಲು ಬೀದಿಬದಿಗಳಲ್ಲಿರುವ ಡಬ್ಬಿಗಳ ಬೇರೆಡೆಗೆ ಸ್ಥಳಾಂತರಿಸಬೇಕು. ರಸ್ತೆ ಬದಿ ಚಿಕ್ಕ ಚಿಕ್ಕ ಅಂಗಡಿಯಿಟ್ಟು ಬಾಡಿಗೆ ಕೊಡುವವರ ಸಂಖ್ಯೆ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ತೆರಿಗೆ ವಿಷಯದಲ್ಲಿ ಚಂದಾ ವಸೂಲಿ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲು ಮುಖ್ಯಾಧಿಕಾರಿಗೆ ಸೂಚಿಸಿದರು.

ಪುರಸಭೆ ಸದಸ್ಯ ಎಂ.ವಿ.ಅಂಜಿನಪ್ಪ ಮಾತನಾಡಿ, ಐಯ್ಯನಕೆರೆ ಶುದ್ದೀಕರಣ, ಒಳಚರಂಡಿ ಲಿಂಕ್, ಎರಡನೇ ಹಂತದ ಕುಡಿಯುವ ನೀರಿನ ಯೋಜನೆಗೆ ರೂ.43 ಕೋಟಿ ಅನುದಾನ ನಿಗಧಿಪಡಿಸಲಾಗಿದೆ ಎಂದರು. ಪುರಸಭೆ ಸದಸ್ಯ ಡಿ.ಅಬ್ದುಲ್ ರೆಹಮಾನ್ ಮಾತನಾಡಿ, ಪುರಸಭೆ ನಗರಸಭೆಯನ್ನಾಗಿಸಿದ ಶಾಸಕರಾದ ಲತಾ ಮಲ್ಲಿಕಾರ್ಜುನ್ ಅವರು, ಹೆಚ್ಚಿನ ಅಭಿವೃದ್ದಿ ಕೆಲಸ ಕೈಗೊಂಡಿದ್ದಾರೆ ಎಂದು ಹೇಳಿದರು.

ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಫಾತೀಮಾಬಿ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ವೆಂಕಟೇಶ್, ಸದಸ್ಯರಾದ ಎಚ್.ಎಂ.ಅಶೋಕ ಹರಾಳು, ಉದ್ದಾರ ಗಣೇಶ, ಎಸ್.ಜಾಕೀರ ಹುಸೇನ್, ಇಜಂತಕರ್ ಮಂಜುನಾಥ, ಭರತೇಶ, ಗೊಂಗಡಿ ನಾಗರಾಜ್, ನಿಟ್ಟೂರು ಭೀಮವ್ವ, ಚಿಕ್ಕೇರಿ ಹನುಮಕ್ಕ, ಉಳ್ಳಂಗಿ ನಿಂಗಮ್ಮ, ಜಾವಿದ್, ಕೌಟಿ ಸುಮಾ, ಗೌಳಿ ವಿನಯ್, ಕಿರಣ್ ಕುಮಾರ, ಲಾಟಿ ದಾದಾಪೀರ, ಶೋಬಾ, ಮುಖ್ಯಾಧಿಕಾರಿ ರೇಣುಕಾ ಎಸ್.ದೇಸಾಯಿ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಸಿಲಿಂಡರ್ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ

ದಾವಣಗೆರೆ  : ಜಿಲ್ಲೆಯ ಎಲ್ಲಾ ಬಿಪಿಸಿಎಲ್, ಹೆಚ್‍ಪಿಸಿಎಲ್ ಹಾಗೂ   ಐಓಸಿಎಲ್ ಅನಿಲ ಗ್ರಾಹಕರ ತಮ್ಮ...

Homeಸುದ್ದಿಗಳು

ರಾಂಚಿಯಲ್ಲಿ ಎಐಎಸ್ಎ ಅಧ್ಯಕ್ಷೆ ಮೇಲಿನ ದಾಳಿ: ಸಂಘಿ ಗೂಂಡಾಗಳ ಬಂಧನಕ್ಕೆ ಗಂಗಾವತಿಯಲ್ಲಿ ಆಗ್ರಹ

ಗಂಗಾವತಿ : ಜಾರ್ಖಂಡ್‌ನ ರಾಂಚಿಯಲ್ಲಿ ನೇಮಕಾತಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗಳ ವಿರುದ್ಧ ಹೋರಾಟ ನಡೆಸುತ್ತಿರುವ...

Homeಸುದ್ದಿಗಳು

ಸಚಿವ ಸ್ಥಾನಕ್ಕೆ ಮನವಿ ಮಾಡಿರುವೆ : ಎಂ.ಪಿ.ಲತಾ

ಹರಪನಹಳ್ಳಿ : ಹಿರಿಯ ನಾಯಕರ ಸಲಹೆಯಂತೆ ಮಹಿಳಾ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ...

Homeಸುದ್ದಿಗಳು

ವಿಜಯನಗರ ಜಿಲ್ಲೆಯಲ್ಲಿ ಭೀಕರ ಮುಂಗಾರು ಅಭಾವ ಹಾಗೂ ಶೇ.60 ರಷ್ಟು ಮಳೆ ಕೊರತೆ: 

ವಿಜಯನಗರ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯನಗರ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದ್ದು,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.