Home ಸುದ್ದಿಗಳು ಜಯಂತಿಗಳು ಒಂದೇ ವೇದಿಕೆಯಲ್ಲಿ ಆಗಲಿ : ಶಾಸಕ ಬಸವಂತಪ್ಪ
ಸುದ್ದಿಗಳು

ಜಯಂತಿಗಳು ಒಂದೇ ವೇದಿಕೆಯಲ್ಲಿ ಆಗಲಿ : ಶಾಸಕ ಬಸವಂತಪ್ಪ

Share
Mla Basavanthappa mayakonda
Mla Basavanthappa mayakonda
Share

ದಾವಣಗೆರೆ :  ದಾರ್ಶನಿಕರ ಜಯಂತಿಯನ್ನು ಒಂದೇ ವೇದಿಕೆಯಲ್ಲಿ ಆಚರಿಸಿ, ಎಲ್ಲಾ ಸಮುದಾಯದವರು ಒಟ್ಟಿಗೆ ಸೇರಿ ಆಚರಣೆ ಮಾಡಿದಾಗ ಸಮಾನತೆ ಸಾಧ್ಯ ಎಂದು ಮಾಯಕೊಂಡ ಶಾಸಕ ಕೆ.ಎಸ್ ಬಸವಂತಪ್ಪ ಅಭಿಪ್ರಾಯಪಟ್ಟರು.

ಶನಿವಾರ  ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ದಾಸ ಶ್ರೇಷ್ಠ ಶ್ರೀಕನಕದಾಸರ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಮಾಡಿ ಬಳಿಕ ಮಾತನಾಡಿದರು‌. ಜಾತಿ ಮತ್ತು ಧರ್ಮಗಳ ಕಂದಾಚರಣೆಯನ್ನು ಸಮಾಜದಿಂದ ತೊಲಗಿಸಲು ಆಳವಾದ ಅನುಭವದ ಮೂಲಕ ಸಮಾಜ ಕಟ್ಟುವಿಕೆಯ ಕೆಲಸ ಮಾಡಿದರು. ಕನಕದಾಸರು ಬರೆದಿರುವ ಪ್ರತಿಯೊಂದು ಕೃತಿಗಳು ಪ್ರಸ್ತುತ ಸಮಾಜಕ್ಕೆ ಪೂರಕವಾಗಿವೆ ಎಂದು ಅಭಿಪ್ರಾಯಪಟ್ಟರು.

ಅಲ್ಲದೇ ಬಾಗಿಲನ್ನು ತೆರೆದು ಸೇವೆಯನ್ನು ಕೊಡು ಹರಿಯೆ, ಎಂಬ  ಮೂಲಕ ಕನಕನ ಕಿಂಡಿ ಉದ್ಭವಿಸಿದ ಹಾಗೂ ಕೇಶವನ ಪ್ರತಿಷ್ಟಾಪನೆ, ಮದ್ಯವನ್ನು ಜೇನುತುಪ್ಪವಾಗಿಸಿದ ಇತರೆ ಪವಾಡಗಳ ಮೂಲಕ ಕನಕದಾಸರು ಇಂದಿಗೂ ಪ್ರಸ್ತುತರಾಗಿದ್ದಾರೆ. ಇಂದು ಇತಿಹಾಸದ ಮತ್ತು ಪುರಾಣದ ಮಹಾಪುರುಷರನ್ನು ದೇವರನ್ನಾಗಿಸುವ ಪರಿಪಾಠವಿದೆ. ಇದು ಬದಲಾಗಬೇಕು, ಮನುಷ್ಯ ದೇವರಾದರೆ ಸಮಸ್ಯೆ ಹೆಚ್ಚುತ್ತದೆ. ಇದು ಬದಲಾಗಬೇಕು. ಸಮಾಜದ ಶಕ್ತಿಯಾಗಿ ನಮ್ಮ ನೆರಳಾಗಿರುವ ಪುರಾಣ ಮತ್ತು ಇತಿಹಾಸದ ಮಾನವತಾವದಿಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.   ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ, ಅಬಕಾರಿ ಇಲಾಖೆಯ ಅಧಿಕಾರಿ ಚಿದಾನಂದ, ಡಿಡಿಪಿಐ ಕೊಟ್ರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಹೆಚ್.ಬಿ ಗೋಣೆಪ್ಪ, ಗುರುನಾಥ, ಪರಶುರಾಮ, ಎಸ್.ಎಸ್.ಗಿರೀಶ್, ಬೀರಪ್ಪ, ಕುರುಬ ಸಮಾಜದ ಮುಖಂಡರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.