ಚಿತ್ರದುರ್ಗ : ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆದ 14ನೇ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸರ್ಕಾರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ಹರ್ಷಿತ ಎಂ.ವಿ. ಸುಚಿತ್ರ, ಅನು, ಲಕ್ಷ್ಮಿ, ರೇವತಿ,ಯವರು 4×100 ಮೀ ರಿಲೇ ಓಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಕಾಲೇಜಿಗೆ ಮತ್ತು ಜಿಲ್ಲೆಗೆ ಹೆಸರು ತಂದುಕೊಟ್ಟಿದ್ದಾರೆ ಎಂದು ಸರ್ಕಾರಿ ವಿಜ್ಞಾನ ಕಾಲೇಜಿನ ದೈಹಿಕ ನಿರ್ದೇಶಕ ಡಾ.ರಾಘವೇಂದ್ರ ಕೆ. ಅವರು ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತಾ ಮಾತನಾಡುತ್ತಿದ್ದರು. ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಮಟ್ಟದ ಸಾಧನೆ ಸಾಧಿಸುತ್ತಿದ್ದು ಅಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕಾದ್ದು ಕಾಲೇಜಿನ ಆಧ್ಯ ಕರ್ತವ್ಯವಾಗಿದೆ, ಹಾಗಾಗಿ ಇನ್ನು ಹೆಚ್ಚಿನ ಮಟ್ಟದಲ್ಲಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸಿ, ಹೆಚ್ಚಿನ ಯಶಸ್ವಿಗೊಳಿಸಲಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ರವಿಕಾಂತ್ ಎಂ ಎನ್. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಮಾತನಾಡಿದರು. ಸಾಧಕ ಕ್ರೀಡಾಪಟುಗಳನ್ನು ಕಾಲೇಜಿನ ಸಿಡಿಸಿ ಸದಸ್ಯರು, ಅಧ್ಯಕ್ಷರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
