Home ರಾಜಕೀಯ ಪರಮೇಶ್ವರನಾಯ್ಕ ಪುತ್ರನ ಮದುವೆಗೆ ಬಂದ ಗಣ್ಯರು ಯಾರು ?
ರಾಜಕೀಯ

ಪರಮೇಶ್ವರನಾಯ್ಕ ಪುತ್ರನ ಮದುವೆಗೆ ಬಂದ ಗಣ್ಯರು ಯಾರು ?

Share
PTP,PARAMESHWARA, SIDDARAMIH
Share

ಹರಪನಹಳ್ಳಿ : ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರ ಕಿರಿಯ ಪುತ್ರ ಪಿ.ಟಿ.ಭರತ್ ಅವರ ಮದುವೆಯ ಅರತಕ್ಷತೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.

ಪುತ್ರನ ಮದುವೆಗಾಗಿ ಎಚ್.ಪಿ.ಎಸ್. ಕಾಲೇಜು ಮೈದಾನದಲ್ಲಿ ಸಾವಿರಾರು ಜನನ ಕೂರಿಸುವ ವೇದಿಕೆ ಸಿದ್ದಪಡಿಸಲಾಗಿತ್ತು. ಏಕ ಕಾಲಕ್ಕೆ 1000 ಜನ ಊಟ ಮಾಡುವುದು, ಅತಿಥಿಗಳಿಗೆ, ಮುಖ್ಯಮಂತ್ರಿ, ಸಚಿವರು, ಶಾಸಕರುಗಳಿಗೆ ಪ್ರತ್ಯೇಕ ಟೆಂಟ್ ನಿರ್ಮಿಸಲಾಗಿತ್ತು. ಮದುವೆ ಹಿನ್ನೆಲೆ ಎಡಿಬಿ ಕಾಲೇಜು ಆವರಣದಲ್ಲಿ ಹೆಲಿಪ್ಯಾಡ್ ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಲಾಗಿತ್ತು. ಸಮಯಕ್ಕೆ ಸರಿಯಾಗಿ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಅವರು ವಧುವರರಿಗೆ ಆಶೀರ್ವಧಿಸಿ ಶುಭಕೋರಿ ತೆರಳಿದರು.

ಉಪ ಸಭಾಪತಿ ರುದ್ರಪ್ಪ ಲಮಾಣಿ, ಸಚಿವರಾದ ಜಿ.ಪರಮೇಶ್ವರ. ಎಸ್.ಎಸ್.ಮಲ್ಲಿಕಾರ್ಜುನ, ಸಂತೋಷ್ ಲಾಡ್, ಸತೀಶ್ ಜಾರಕಿಹೊಳಿ, ಬಿ.ಝೆಡ್.‌ಜಮೀರ್ ಅಹ್ಮದ್ ಖಾನ್, ಪ್ರಿಯಾಂಕ ಖರ್ಗೆ, ಮಾಜಿ ಸಚಿವ ಎಚ್.ಆಂಜನೇಯ, ಶಾಸಕರಾದ ಗವಿಯಪ್ಪ, ಮಾಯಕೊಂಡ ಬಸವಂತಪ್ಪ, ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಸೇರಿದಂತೆ ಅನೇಕ ಗಣ್ಯರ ದಂಡು ನೆರೆದಿತ್ತು. ಹಡಗಲಿ ವಿದಾನಸಭಾ ಕ್ಷೇತ್ರ, ಹರಪನಹಳ್ಳಿ ತಾಲ್ಲೂಕಿನಾಧ್ಯಂತ ಸಾವಿರಾರು ಜನ ಆಗಮಿಸಿದ್ದರು. ವೇದಿಕೆಯಲ್ಲಿ ಮಂಜು ಇವೆಂಟ್ಸ್ ಅವರಿಂದ ಸಾಂಸ್ಕೃತಿಕ ಗಾಯನ ವ್ಯವಸ್ಥೆ ಮಾಡಿದ್ದು ವಿಶೇಷವಾಗಿತ್ತು.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯ

ಬಿಜೆಪಿ ಹಿರಿಯ ನಾಯಕರ ದಂಡು: ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶ್ರೀರಾಮುಲು, ಕರುಣಾಕರ ರೆಡ್ಡಿ ಭಾಗಿ :

ವಿಜಯನಗರ :  ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ...

Homeರಾಜಕೀಯ

ಪೌರ ಕಾರ್ಮಿಕ ಡಿ.ಲಿಂಗಪ್ಪ ನಿವೃತ್ತಿ

ಹರಪನಹಳ್ಳಿ :  ನಗರಸಭೆಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಡಿ.ಲಿಂಗಪ್ಪ ಅವರನ್ನು...

Homeರಾಜಕೀಯ

ಹಲುವಾಗಲು ಗ್ರಾಮಸ್ಥರಿಂದ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರಿಗೆ ಮನವಿ :

ಹರಪನಹಳ್ಳಿ: ತಾಲ್ಲೂಕಿನ ಪ್ರಮುಖ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಹಲವಾಗಲು ಗ್ರಾಮದ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ...

Homeರಾಜಕೀಯ

ಹರಪನಹಳ್ಳಿ ಬೆಸ್ಕಾಂ ನೌಕರರ ಪ್ರತಿಭಟನೆ.

ಹರಪನಹಳ್ಳಿ : ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವುದನ್ನು ವಿರೋಧಿಸುತ್ತಿದ್ದೇವೆ ಇಲಾಖೆಯ ಎಲ್ಲಾ ನೌಕರರು ಹಾಗೂ ಸಿಬ್ಬಂದಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.