Home ಶಿಕ್ಷಣ ಮೊಬೈಲ್ ನಿರ್ಲಕ್ಷ್ಯಿಸಿ, ಪುಸ್ತಕ ಪ್ರೀತಿಸಿ : ಎಂ.ಪಿ.ಲತಾ
ಶಿಕ್ಷಣ

ಮೊಬೈಲ್ ನಿರ್ಲಕ್ಷ್ಯಿಸಿ, ಪುಸ್ತಕ ಪ್ರೀತಿಸಿ : ಎಂ.ಪಿ.ಲತಾ

Share
MPLATHA,MOBILE,NEGLATE
Share

 ಹರಪನಹಳ್ಳಿ : ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರದ ಹಾಸ್ಟೆಲ್‍ ಗಳನ್ನು ನಡೆಸುತ್ತಿದೆ, ಇವುಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ಬಗ್ಗೆ ಚಿಂತಿಸಿ, ಮೊಬೈಲ್ ನಿರ್ಲಕ್ಷಿಸಿ, ಪುಸ್ತಕ ಪ್ರೀತಿಸುವುದನ್ನು ಕಲಿಯಿರಿ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಸಲಹೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಬಳಿ ನಿರ್ಮಿಸಿರುವ  ದಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ನೂತನ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಾಧನೆಯ ಕಡೆಗೆ ಚಿತ್ತ ಹರಿಸಬೇಕು. ಹಾಸ್ಟೆಲ್‍ ನಲ್ಲಿ ಉಳಿದಿರುವ ವಿದ್ಯಾರ್ಥಿನಿಯರು ಹೆಚ್ಚು ಕಾಲ ಅಧ್ಯಯನದಲ್ಲಿ ಕಾಲಕಳೆಯಿರಿ. ಮೊಬೈಲ್‍ ಬಳಕೆಗೆ ನಿರ್ಲಕ್ಷಿಸಿ ಎಂದು ಸಲಹೆ ನೀಡಿದರು.

ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾಧಿಕಾರಿ ಜಿ.ಶಶಿಕಲಾ,  ಹರಪನಹಳ್ಳಿ ತಾಲ್ಲೂಕಿಗೆ ಬಾಕಿ ಇರುವ ಮೂರು ವಿದ್ಯಾರ್ಥಿ ನಿಲಯಗಳಿಗೆ ಕಟ್ಟಡ ಮುಂಜೂರಾದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಶಾಸಕರು ನೂತನ ಕಟ್ಟಡಗಳಿಗೆ ಅನುದಾನ ಮುಂಜೂರು ಮಾಡಬೇಕು ಎಂದು ಮನವಿ ಮಾಡಿದರು.  ಹರಪನಹಳ್ಳಿ ಶಾಸಕಿ ಲತಾ ಅವರು ಮಹಿಳೆಯರು, ಬಾಲಕಿಯರ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತಿದ್ದಾರೆ ಎಂದರು.

ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ, ಗೃಹ ಮಂಡಳಿ ಅಧಿಕಾರಿ ಸುನೀಲ್ ಕುಮಾರ, ಬಿಸಿಎಂ ಕಲ್ಯಾಣಾಧಿಕಾರಿ ಕೊಳಚಿ ಭೀಮಪ್ಪ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ವೆಂಕಟೇಶ್, ಪುರಸಭೆ ಸದಸ್ಯ ಎಂ.ವಿ.ಅಂಜಿನಪ್ಪ, ಡಿ.ಅಬ್ದುಲ್ ರೆಹಮಾನ್, ಜಾಕೀರ ಹುಸೇನ್, ಮುಖಂಡರಾದ ಮೈದೂರು ರಾಮಪ್ಪ,  ನಾಗರಾಜ್, ಮತ್ತೂರು ಬಸವರಾಜ್, ಗುರುಸಿದ್ದಯ್ಯ , ಚಿಕ್ಕೇರಿ ಬಸಪ್ಪ ಬಿ.ಎಚ್.ಚಂದ್ರಪ್ಪ, ಹರೀಶ್ ನಾಯ್ಕ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Homeಶಿಕ್ಷಣ

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಸಮೂದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ...

Homeಶಿಕ್ಷಣ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಕನ್ನಡ ರತ್ನ ಪ್ರಶಸ್ತಿ’ ಪ್ರದಾನ

ಹರಪನಹಳ್ಳಿ :  ತಾವು ಸಂಪಾದಿಸಿದ ಆದಾಯದಲ್ಲಿ ಸ್ವಲ್ಪ ಹಣ ಕನ್ನಡ ಸೇವೆಗಾಗಿ ಮೀಸಲಿಟ್ಟು ಕೆಲಸ ಮಾಡುತ್ತಿರುವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.