Home ಸುದ್ದಿಗಳು ಅರಸೀಕೆರೆ : ಗ್ರಾಮ ಪಂಚಾಯಿತಿ ವಿಶೇಷ ಗ್ರಾಮ ಸಭೆ
ಸುದ್ದಿಗಳು

ಅರಸೀಕೆರೆ : ಗ್ರಾಮ ಪಂಚಾಯಿತಿ ವಿಶೇಷ ಗ್ರಾಮ ಸಭೆ

Share
HARANAHALLI,ARSIKEREGP, GRAMASABE
Share

 ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಗ್ರಾಮದ ಚಿಕ್ಕ ಕೆರೆ ಅಂಗಳದಲ್ಲಿ ಕಸ ಹಾಕಿದವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಾರುತಿ ಹೇಳಿದರು.

ತಾಲ್ಲೂಕಿನ ಅರಸೀಕೆರೆ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷತೆ ಪಿ.ಕೆಂಚಮ್ಮ ಅಧ್ಯಕ್ಷತೆಯಲ್ಲಿ ಮಂಗಳವಾರ ಜರುಗಿದ ವಿಶೇಷ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮದ ಬಸ್ ನಿಲ್ದಾಣ ಬಳಿಯಿರುವ ಕೋಳಿ ಅಂಗಡಿಯವರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್‍ ಅವರು ಕಸ ಹಾಕದಂತೆ ಸೂಚನೆ ನೀಡಿದರು.   ಯಾರಾದರೂ ಚಿಕ್ಕ ಕೆರೆಯಲ್ಲಿ ಕಸ ಹಾಕಿದರೆ ನೋಟೀಸ್ ನೀಡುವುದಾಗಿ ಎಚ್ಚರಿಕೆ ನೀಡಿದರು.

ಗ್ರಾಮಸ್ಥ ಹುಲುಗಪ್ಪ ಮಾತನಾಡಿ, ಸಾರ್ವಜನಿಕ ಅಂಗಡಿಗಳು ಕೆರೆ ಒತ್ತುವರಿ ಮಾಡಿದ್ದಾರೆ, ಅಂತಹವರಿಗೆ ಇಸ್ವತ್ತು ಕೊಟ್ಟಿರುವುದನ್ನು ಪ್ರಶ್ನಿಸಿ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಗಿದೆ, ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಗ್ರಾಮ ಪಂಚಾಯಿತಿ ಅಧಿಕಾರಿಗಳು, ಮಹಿಳಾ ಸ್ವ ಸಹಾಯ ಸಂಘದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಮುಖಂಡರು ಸ್ಥಳಕ್ಕೆ ಬೇಟಿಕೊಟ್ಟು ಚಿಕ್ಕಕೆರೆ ಸ್ಥಳ ಪರಿಶೀಲಿಸಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು 2026-27ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸಲಾಯಿತು.  ಕೆಂಚಮ್ಮ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ಸದಸ್ಯರಾದ ಕೆ.ಆನಂದಪ್ಪ, ಕೆ.ಮಹಾಂತೇಶ್, ಫರ್ಜನಾ ಬಾನು,   ವಿಶಾಲ, ಮುಖಂಡರಾದ ಪಿ. ಹಾಲೇಶ್, ಸಲಾಂ ಸಾಹೇಬ್, ಹುಲುಗಪ್ಪ, ಎಚ್. ದುರುಗಪ್ಪ, ಹಾಲಪ್ಪ, ನಾಗರಾಜ, ಪರುಸಪ್ಪ, ಮಹಿಳಾ ಸ್ವಾ ಸಹಾಯ ಸಂಘದ ಪದಾಧಿಕಾರಿಗಳಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.