Home ಸುದ್ದಿಗಳು ಆಯುರ್ವೇದ ಉಚಿತ ಚಿಕಿತ್ಸಾ ಶಿಬಿರ
ಸುದ್ದಿಗಳು

ಆಯುರ್ವೇದ ಉಚಿತ ಚಿಕಿತ್ಸಾ ಶಿಬಿರ

Share
Share

ವಿಜಯನಗರ (ಹೊಸಪೇಟೆ) : ನಗರದ ರೈಲ್ವೇ ಸ್ಟೇಷನ್ ರಸ್ತೆಯ ರೋಟರಿ ಕ್ಲಬ್‌ನಲ್ಲಿ ನವೆಂಬರ್ 23 ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆವರೆಗೆ ನೋವು ನಿವಾರಣೆಗಾಗಿ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ ಎಂದು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮುನಿವಾಸುದೇವ ರೆಡ್ಡಿ ತಿಳಿಸಿದ್ದಾರೆ.

ಆಯುರ್ವೇದ ಚಿಕಿತ್ಸಾ ಶಿಬಿರದಲ್ಲಿ ದೀರ್ಘಕಾಲಿನ ನೋವುಗಳಾದ ಸೊಂಟ ನೋವು, ಕುತ್ತಿಗೆ ನೋವು, ಭುಜನೋವು, ಬೆನ್ನು ನೋವು, ಮಂಡಿ ನೋವು, ಸಂಧಿವಾತ, ಅಮವಾತ, ನರರೋಗಗಳು ಸೇರಿದಂತೆ ಎಲ್ಲಾ ವಿಧದ ತೀವ್ರ ನೋವುಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ಪರಿಣಿತ ಮತ್ತು ತಜ್ಞ ಆಯುರ್ವೇದ ವೈದ್ಯರಿಂದ ಉಚಿತ ತಪಾಸಣೆ, ಸಲಹೆ ಮತ್ತು ಚಿಕಿತ್ಸೆ ನೀಡಲಾಗುತ್ತದೆ. ಅಗ್ನಿಕರ್ಮ ಮತ್ತು ಮರ್ಮ ಚಿಕಿತ್ಸೆ ವೇದನಾ ನಿರ್ವಹಣೆಗೆ ಪರಿಣಾಮಕಾರಿ ವಿಧಾನಗಳನ್ನು ತಿಳಿಸಲಾಗುತ್ತದೆ.

ಆರೋಗ್ಯ ಸ್ಥಿತಿಗೆ ಅನುಗುಣವಾಗಿ ಯೋಗಾಸನಗಳ ಮಾರ್ಗದರ್ಶನ ಮತ್ತು ಉಚಿತ ಲಭ್ಯ ಆಯುರ್ವೇದ ಔಷಧಿಗಳನ್ನು ವಿತರಣೆ ಮಾಡಲಾಗುತ್ತದೆ. ಸಕ್ಕರೆ ಕಾಯಿಲೆಗೆ ಉಚಿತ ರಕ್ತ ಪರೀಕ್ಷೆ ಹಾಗೂ ಅಗತ್ಯವಿದ್ದಲ್ಲಿ ಮೂಳೆ ಸಾಂದ್ರತೆಯ ಪರೀಕ್ಷೆ ಮಾಡಲಾಗುತ್ತದೆ. ಚಿಕಿತ್ಸೆಗೆ ಬರುವವರು ಹಳೆಯ ವೈದ್ಯಕೀಯ ವರದಿಗಳು(ಎಕ್ಸರೇ ಮತ್ತು ಎಂಆರ್‌ಎಫ್) ತರಬೇಕು ಹಾಗೂ ಈಗಾಗಲೇ ಬಳಸುತ್ತಿರುವ ಔಷಧಿಗಳ ವಿವರಗಳನ್ನು ತರಬೇಕು. ಹೆಚ್ಚಿನ ಮಾಹಿತಿಗಾಗಿ ಮತ್ತು ಮುಂಗಡ ನೊಂದಣಿಗಾಗಿ ಮೊ: 9535981085 ಸಂಖ್ಯೆ ಸಂಪರ್ಕಿಸಿ.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.