Home ಸುದ್ದಿಗಳು ಹರಪನಹಳ್ಳಿಯಲ್ಲಿ ಇಎಸ್ಐ ಆಸ್ಪತ್ರೆಗೆ ಕಾರ್ಮಿಕರ ಒತ್ತಾಯ
ಸುದ್ದಿಗಳು

ಹರಪನಹಳ್ಳಿಯಲ್ಲಿ ಇಎಸ್ಐ ಆಸ್ಪತ್ರೆಗೆ ಕಾರ್ಮಿಕರ ಒತ್ತಾಯ

Share
esi,hospital, labour, protest
Share

ಹರಪನಹಳ್ಳಿ : ಕಾರ್ಮಿಕರ ಅನುಕೂಲಕ್ಕಾಗಿ ತಾಲ್ಲೂಕಿನಲ್ಲಿ ವಿಮಾ (ಇಎಸ್‍ಐ) ಆಸ್ಪತ್ರೆ ತೆರೆಯಬೇಕು ಎಂದು ಆಗ್ರಹಿಸಿ ಆಲ್‍ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್‍ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಚೇರಿ ಆವರಣದಲ್ಲಿ ಪ್ರತಿಭಟಿಸಿದ ಕಾರ್ಮಿಕರು ಇಎಸ್‍ಐ ಆಸ್ಪತ್ರೆ ಆರಂಭಿಸಲು ಆಗ್ರಹಿಸಿ, ಮನವಿ ಸಲ್ಲಿಸಿದರು. ‘ತಾಲ್ಲೂಕಿನಲ್ಲಿ 30 ಸಾವಿರ ಕಾರ್ಮಿಕರ ನೊಂದಣಿಯಾಗಿದೆ. ಅಪ‍ಘಾತ, ಕ್ಷಯ, ದಮ್ಮು, ಕೀಲುಮೂಳೆ ನೋವುಗಳಿಗೆ ಚಿಕಿತ್ಸೆ ಪಡೆಯಲು ದೂರದ ದಾವಣಗೆರೆ, ಬಳ್ಳಾರಿಗೆ ತೆರಳುವ ಅನಿವಾರ್ಯತೆ ಇದೆ. ನಗರದಲ್ಲಿ ಇಎಸ್‍ಐ, ಮೆಡಿಕಲ್ ಸೌಲಭ್ಯವಿಲ್ಲದ ಪರಿಣಾಮ ಕಾರ್ಮಿಕರು ಪರದಾಡುವಂತಾಗಿದೆ. ಕೂಡಲೇ ಇಎಸ್‍ಐ ಆಸ್ಪತ್ರೆ ತೆರೆಯಬೇಕು ಎಂದು ಆಗ್ರಹಿಸಿದರು. ಜಿಲ್ಲಾಧ್ಯಕ್ಷ ಸಂದೇರ ಪರಶುರಾಮ್, ಜಿಲ್ಲಾ ಕಾರ್ಯದರ್ಶಿ ಗುಳೇದಹಟ್ಟಿ ಸಂತೋಷ, ಹುಲಿಕಟ್ಟೆ ಮೈಲಪ್ಪ, ಕಲೀಂ, ಮಹಮ್ಮದ್ ರಫೀಕ್, ಎಸ್.ರಾಜು, ಬಿ.ಎಸ್.ಪ್ರಕಾಶ್, ಮಹಮ್ಮದ್ ಗೌಸ್ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.