Home ಸುದ್ದಿಗಳು ಮರಳು ಬ್ಲಾಕ್‍ ಟೆಂಡರ್ ಪ್ರಕ್ರಿಯೆಗೆ ನ್ಯಾಯಾಲಯ ತಡೆ?
ಸುದ್ದಿಗಳು

ಮರಳು ಬ್ಲಾಕ್‍ ಟೆಂಡರ್ ಪ್ರಕ್ರಿಯೆಗೆ ನ್ಯಾಯಾಲಯ ತಡೆ?

Share
Share

ವಿಜಯನಗರ (ಹೊಸಪೇಟೆ): ಜಿಲ್ಲೆಯ ತುಂಗಭದ್ರಾ ನದಿಪಾತ್ರ, ಹಳ್ಳ, ನದಿಗಳ ಪಾತ್ರದಲ್ಲಿ ಲಭ್ಯವಿರುವ ಹಡಗಲಿ, ಹರಪನಹಳ್ಳಿ ತಾಲ್ಲೂಕಿನ 8 ಮರಳು ಬ್ಲಾಕ್‍ಗಳಿಗೆ ಕರೆದಿದ್ದ ಇ-ಟೆಂಡರ್ ಗೆ ಧಾರವಾಡ ಹೈಕೋರ್ಟ್‍ ಪೀಠ ಟೆಂಡರ್ ಪ್ರಕ್ರಿಯೆಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಇ ಟೆಂಡರ್ ಮೂಲಕ ವಿಲೇವಾರಿಪಡಿಸಲು ಏಪ್ರಿಲ್ 5 ರಂದು ರಾಜ್ಯ ಸರ್ಕಾರ ರಾಜ್ಯಪತ್ರದ ಮೂಲಕ ಅಧಿಸೂಚನೆ ಜಾರಿಗೊಳಿಸಿತ್ತು. ಅದರನ್ವಯ ಗಣಿ, ಭೂ ವಿಜ್ಞಾನ ಇಲಾಖೆಯು ಆ.12ರಂದು ಪತ್ರಿಕಾ ಪ್ರಕಟಣೆ ಹೊರಡಿಸಿ,  ಹೂವಿನ ಹಡಗಲಿ ತಾಲ್ಲೂಕಿನ ಹರವಿ-203 (2 ಕೇಂದ್ರ), ಕೊಂಬಳಿ-294 (2), ಹಕ್ಕಂಡಿ-286, ಕಡತಿ 316, , ಹಿರೆಬನ್ನಿಮಟ್ಟಿ 296, ನಿಟ್ಟೂರು 113 ಬ್ಲಾಕ್‍ ಗಳಲ್ಲಿ ಆಯಾ ಪ್ರದೇಶಕ್ಕೆ ಅನುಗುಣವಾಗಿ ಎಕರೆವಾರು ನಿಗಧಿಪಡಿಸಿ ಅರ್ಜಿ ಕರೆದಿತ್ತು.

ಕೆಪಿಪಿಪಿ ಕಾಯ್ದೆ ಅನ್ವಯ ಟೆಂಡರ್ ಆಹ್ವಾನಿಸಿ 90 ದಿನದೊಳಗೆ ಅರ್ಜಿ ವಿಲೇವಾರಿ ಪಡಿಸಬೇಕಿತ್ತು. ಆದರೆ ಅವಧಿ ಪೂರ್ಣಗೊಂಡು ಅರ್ಜಿ ವಿಲೇಪಡಿಸದ ಸರ್ಕಾರದ ವಿಳಂಬ ನೀತಿ ಖಂಡಿಸಿ, ಕೆಲ ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿ ಪರಿಶೀಲಿಸಿರುವ ನ್ಯಾಯಪೀಠ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನೊಟೀಸ್ ಜಾರಿಗೊಳಿಸಿ, ಇ ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ ನೀಡಿದೆ ಎಂದು ಅರ್ಜಿದಾರ ಹೊಂಬಾಳೆ ರೇವಣ್ಣ ಮಾಹಿತಿ ನೀಡಿದ್ದಾರೆ. ನ್ಯಾಯಾಲದಲ್ಲಿ ದಾಖಲಾಗಿರುವ ಅರ್ಜಿ ಸಂಖ್ಯೆ WP/0108830/2025 ಆಗಿದ್ದು, ಮುಂದಿನ ವಾಯಿದೆ ಡಿಸೆಂಬರ್ 4 ರಂದು ಜರುಗಲಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.