Home ಸುದ್ದಿಗಳು ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆ
ಸುದ್ದಿಗಳು

ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆ

Share
Harapanahalli-GVVDS-SCHOOL-PMPOSHAN
ಹರಪನಹಳ್ಳಿ ತಾಲ್ಲೂಕು ಜಿವಿವಿಡಿಎಸ್ ಶಾಲೆಯಲ್ಲಿ ನಡೆದ ಜಾಗೃತಿ ಅಭಿಯಾನದಲ್ಲಿ  ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆ ಕುರಿತು ಸಾಮಾಜಿಕ ಪರಿಶೋಧನೆ ವ್ಯವಸ್ಥಾಪಕ ಹೆಚ್‍.ಕೊಟ್ರೇಶ್ ಮಾತನಾಡಿದರು.
Share

ಹರಪನಹಳ್ಳಿ : ಪ್ರಾಥಮಿಕ ಶಾಲಾ ಹಂತದಲ್ಲಿ ಸಮಗ್ರ ಶಿಕ್ಷಣ, ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆ ಪ್ರಚುರಪಡಿಸಲಾಗುತ್ತಿದೆ ಎಂದು ಸಾಮಾಜಿಕ ಪರಿಶೋಧನೆ ವ್ಯವಸ್ಥಾಪಕ ಹೆಚ್‍.ಕೊಟ್ರೇಶ್ ಅಭಿಪ್ರಾಯಪಟ್ಟರು.

 ತಾಲ್ಲೂಕಿನ ಅರಸೀಕೆರೆ ಗ್ರಾಮದ ಜಿ.ವಿ.ವಿ.ಡಿ.ಎಸ್. ಪ್ರೌಢಶಾಲೆಯಲ್ಲಿ ಸಾಮಾಜಿಕ ಪರಿಶೋಧನ ನಿರ್ದೇಶನಾಲಯ ಬೆಂಗಳೂರು 2025-26 ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಮತ್ತು ಕ್ಷೀರಭಾಗ್ಯ ಯೋಜನೆಗಳ ಸಾಮಾಜಿಕ ಪರಿಶೋಧನ, ಶಾಲಾ ಸಭೆ, ಪೋಷಕರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನ.20 ರಿಂದ ನ.24ರ ವರೆಗೆ ಶಾಲಾ ಹಂತದಲ್ಲಿ ಆಯೋಜಿಸಲಾಗಿತ್ತು. ಯೋಜನೆಗಳ ಬಗ್ಗೆ ಪಾರದರ್ಶಕತೆ ಬಗ್ಗೆ ತಿಳಿಸಿಕೊಡಲಾಗಿದೆ.  ಮಕ್ಕಳಿಂದ ಪಾಲಕ, ಪೋಷಕರಿಗೂ ಅರಿವು ಮೂಡಿಸಲಾಗಿದೆ ಎಂದರು.  ಹರಪನಹಳ್ಳಿ ತಾಲ್ಲೂಕಿನ ಜಿವಿವಿಡಿಎಸ್ ಪ್ರೌಢಶಾಲೆ, ಕಮ್ಮತ್ತಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ದುಗ್ಗಾವತಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ,  ಹಾರಕನಾಳು ಸಣ್ಣ ತಾಂಡ ಕಿರಿಯ ಪ್ರಾಥಮಿಕ ಶಾಲೆಗಳು ಆಯ್ಕೆಯಾಗಿವೆ. ಮದ್ಯಾಹ್ನದ ಬಿಸಿಯೂಟ ಹಾಜರಾತಿ ಹೆಚ್ಚಳ ಮಾಡುವುದು. ಮೊಟ್ಟೆ, ಬಾಳೆಹಣ್ಣು, ರಾಗಿಮಾಲ್ಟ್ ನೀಡಲಾಗುತ್ತದೆ ಎಂದು ತಿಳಿಸಿದರು.  ಮುಖ್ಯಶಿಕ್ಷಕಿ ಕೆ.ಶಾಂತಕುಮಾರಿ ಅಧ್ಯಕ್ಷತೆ ವಹಿಸಿದ್ದರು. ವಿ.ಎಸ್.ಎಸ್‍.ಎನ್‍. ಅಧ್ಯಕ್ಷ ಇಟ್ಟಿಗಿಹಳ್ಳಿ ಬಸವರಾಜ್, ಮಲ್ಲಿಕಾರ್ಜುನ್, ಚಿದಾನಂದ ಗೌಡ, ಶಿಕ್ಷಕ ಸಣ್ಣ ಸಿದ್ರಾಮಯ್ಯ, ರಘು, ರೇಖಾ, ರಾಜೇಶ್ವರಿ, ಕಾವೇರಿ, ಮಂಜುಳಾ ಇದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.