Home ಸುದ್ದಿಗಳು 371ಜೆ ನಿಂದ ಕಲ್ಯಾಣ ಕರ್ನಾಟಕ ಏಳಿಗೆ : ಪ್ರಿಯಾಂಕ ಖರ್ಗೆ
ಸುದ್ದಿಗಳು

371ಜೆ ನಿಂದ ಕಲ್ಯಾಣ ಕರ್ನಾಟಕ ಏಳಿಗೆ : ಪ್ರಿಯಾಂಕ ಖರ್ಗೆ

Share
Share

ಪ್ರಿಯಾಂಕ ಖರ್ಗೆ ‘x’ ವಾಲ್ ನಿಂದ

ಕಲ್ಯಾಣ ಕರ್ನಾಟಕದ ಏಳಿಗೆಗೆ ಆರ್ಟಿಕಲ್ 371ಜೆ ಬಹುದೊಡ್ಡ ಕೊಡುಗೆ. ಈ ವಿಶೇಷ ಸ್ಥಾನಮಾನವು ಸಮರ್ಪಕವಾಗಿ ಅನುಷ್ಠಾನಗೊಂಡಾಗ ಮಾತ್ರ ಅದರ ಆಶಯ ಈಡೇರುತ್ತದೆ.
ನಿರಂತರ ಮೇಲ್ವಿಚಾರಣೆಯಿಂದ ಅನುಷ್ಠಾನಕ್ಕೆ ನ್ಯಾಯ ಒದಗಿಸಬಹುದು.

ನನ್ನ ಅಧ್ಯಕ್ಷತೆಯಲ್ಲಿ ನಡೆದ ಆರ್ಟಿಕಲ್ 371ಜೆ ಕುರಿತಾಗಿ
ಸರ್ಕಾರ ಹೊರಡಿಸಿದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಸಂಪುಟ ಉಪ ಸಮಿತಿಯ ಸಭೆ ನಡೆಸಲಾಯಿತು.

– 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳನ್ನು ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ಬದ್ಧತೆಯ ಕೊರತೆ ಎದ್ದು ಕಾಣುತ್ತಿದೆ, ವಿಳಂಬ ಧೋರಣೆಯನ್ನು ಬದಿಗಿರಿಸಿ ಸರ್ಕಾರದ ಆದೇಶಗಳನ್ನು ಅನುಷ್ಠಾನಕ್ಕೆ ತರಬೇಕು, ಮತ್ತು ಅಧಿಕಾರಿಗಳು ಸರ್ಕಾರದ ಆದೇಶಗಳನ್ನು ತಮಗೆ ಮನಸಿಗೆ ಬಂದಂತೆ ವ್ಯಾಖ್ಯಾನಿಸದೆ ಯಥಾವತ್ ಜಾರಿಗೆ ಕ್ರಮ ವಹಿಸಬೇಕು.

– ಮುಂಬಡ್ತಿ ನೀಡುವಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಮಿಕ್ಕುಳಿದ ವೃಂದದ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸದೇ ಒಂದೇ ಜೇಷ್ಠತಾ ಪಟ್ಟಯನ್ನು ಪ್ರಕಟಿಸಲು ಕ್ರಮ ವಹಿಸಬೇಕು.

– ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಪೈಕಿ, 5000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, 4193 ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆಯಾಗಿದ್ದಾರೆ, ಈ ಪೈಕಿ 3837 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿರುವುದರ ಬಗ್ಗೆ ಮಾಹಿತಿ ಪಡೆಯಲಾಯ್ತು.

– ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲವು ಪ್ರಕರಣಗಳು ನ್ಯಾಯಾಲಯದ ಮುಂದಿದ್ದು, ಅಂತಹ ಪ್ರಕರಣಗಳ ಸ್ವರೂಪ, ಪ್ರಸ್ತುತ ಸ್ಥಿತಿ ಗತಿ ಕುರಿತ ಮಾಹಿತಿ ನೀಡುವುದರ ಜೊತೆಗೆ ಅವುಗಳ ಇತ್ಯರ್ಥಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತಂತೆ ಕಾಲಮಿತಿಯೊಳಗೆ ಪೂರ್ಣ ವಿವರಗಳನ್ನು ಸಂಪುಟ ಉಪ ಸಮಿತಿಗೆ ಸಲ್ಲಿಸಲು ಸೂಚಿಸಲಾಯ್ತು.

– ಸಚಿವಾಲಯದ ಅಧಿಕಾರಿ ಹಾಗೂ ನೌಕರರ ಜೇಷ್ಠತೆಯನ್ನು 2014ರ ಏಪ್ರಿಲ್‌ 21ರಿಂದ ಜಾರಿಗೆ ಬರುವಂತೆ ಕಾಲ್ಪನಿಕ ಜೇಷ್ಠತೆ ಪಟ್ಟಿಯನ್ನು ಸಿದ್ಧಪಡಿಸಲು ನೀಡಲಾಗಿದ್ದ ಸೂಚನೆಗೆ ಅನುಗುಣವಾಗಿ ಸಹಾಯಕ, ಹಿರಿಯ ಸಹಾಯಕ, ಶಾಖಾಧಿಕಾರಿ, ಶೀಘ್ರಲಿಪಿಗಾರರು ಹಾಗೂ ಪತ್ರಾಂಕಿತ ಆಪ್ತ ಸಹಾಯಕ ವೃಂದದ ಅಧಿಕಾರಿ/ನೌಕರರ ಜೇಷ್ಠತೆಯನ್ನು ಮರು ನಿಗದಿಪಡಿಸಲಾಗಿರುವ ಮಾಹಿತಿಯನ್ನು ಪಡೆಯಲಾಯ್ತು.

ಪ್ರಿಯಾಂಕ ಖರ್ಗೆ, ಸಚಿವರು,  ಕರ್ನಾಟಕ ಸರ್ಕಾರ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.