Home ಸುದ್ದಿಗಳು ಡಿ.1ಕ್ಕೆ ಬಿಜೆಪಿ, ರೈತ ಸಂಘ ಪ್ರತಿಭಟನೆ
ಸುದ್ದಿಗಳು

ಡಿ.1ಕ್ಕೆ ಬಿಜೆಪಿ, ರೈತ ಸಂಘ ಪ್ರತಿಭಟನೆ

Share
BJP PROTEST
Share

ಪ್ರಜಾವಾಣಿ ವಾರ್ತೆ

ಹರಪನಹಳ್ಳಿ : ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸಿ ರೈತಪರ ಸಂಘಟನೆಗಳು, ಬಿಜೆಪಿ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಡಿ.೧ ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ.

ಪ್ರವಾಸಿ ಮಂದಿರದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್ ಮಾತನಾಡಿ, ಭಿನ್ನಾಭಿಪ್ರಾಯ ಮರೆತು, ರೈತರ ಪರವಾಗಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.ಬಿಜೆಪಿ, ಅಖಿಲ ಭಾರತ ಕಿಸಾನ್ ಸಭಾ, ಕರ್ನಾಟಕ ಪ್ರಾಂತ ರೈತ ಸಂಘ, ಡಿಎಸ್‌ಎಸ್ (ಭೀಮಾವಾದ) ಸೇರಿ ವಿವಿಧ ಸಂಘಟನೆಗಳು ಪೂರ್ವಸಿದ್ಧತೆ ಮಾಡಿಕೊಂಡಿವೆ ಎಂದು ಮಾಹಿತಿ ನೀಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಯಡಿಹಳ್ಳಿ ಶೇಖರಪ್ಪ ಮಾತನಾಡಿ, ಮದ್ಯವರ್ತಿಗಳ ಹಾವಳಿಯಿಂದ ರೈತರು ನಲುಗಿದ್ದಾರೆ. ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ನಿಗಧಿಪಡಿಸಲು ಆಗ್ರಹಿಸಿದರು.

ಬಿಜೆಪಿ ಮುಖಂಡ ಆರ್.ಲೋಕೇಶ್ ಮಾತನಾಡಿ, ತಾಲ್ಲೂಕಿನ ರೈತರು ಪಕ್ಷಾತೀತವಾಗಿ ಪ್ರತಿಭಟನೆಗೆ ಆಗಮಿಸಲು ಮನವಿ ಮಾಡಿದರು.  ಹೊಸಳ್ಳಿ ಮಲ್ಲೇಶ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ಜಿ ಸಿದ್ದೇಶ್, ಪುರಸಭೆ ಮಾಜಿ ಅಧ್ಯಕ್ಷ ಮೆಹಬೂಬ್ ಸಾಬ್, ಮಂಡಲ ಉಪಾಧ್ಯಕ್ಷ ಬಸವನಗೌಡ, ಗಂಗಾನಾಯ್ಕ, ಸಹ ಕಾರ್ಯದರ್ಶಿ ಮತ್ತಿಹಳ್ಳಿ ಕೆಂಚಪ್ಪ, ಪ್ರಸನ್ನ,  ಕಿರಣ್ ಶಾನಭಾಗ, ತರಕಾರಿ ಹನುಮಂತಪ್ಪ, ಕೌಟಿ ವಾಗೀಶ್, ಜಾವೀದ್, ಮಲ್ಲೇಶ್, ಗೌರಿಹಳ್ಳಿ ಬಸವರಾಜ್, ಪೂಜಾರ್ ಮಹೇಶ, ಸುಭಾಷ್ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ...

Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.