Home ಸುದ್ದಿಗಳು ಹರಪನಹಳ್ಳಿ : ಬಿಜೆಪಿಯಿಂದ ಅಂಬೇಡ್ಕರ ಪರಿನಿರ್ವಾಣ
ಸುದ್ದಿಗಳು

ಹರಪನಹಳ್ಳಿ : ಬಿಜೆಪಿಯಿಂದ ಅಂಬೇಡ್ಕರ ಪರಿನಿರ್ವಾಣ

Share
ಹರಪನಹಳ್ಳಿ ಬಿಜೆಪಿ
Share

ಹರಪನಹಳ್ಳಿ : ನಗರದ ರಾಮಾಂಜನೇಯ ದೇವಸ್ಥಾನ ಹತ್ತಿರ ಇರುವ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ 69ನೇ ಮಹಾ ಪರಿನಿರ್ವಾಣ ದಿನ ಪೂಜೆ ಸಲ್ಲಿಸಲಾಯಿತು.

ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಣಿವಿಹಳ್ಳಿ ಮಂಜುನಾಥ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ ಅವರು ವಿಶ್ವವಿಜ್ಞಾನಿ. ಸಮ ಸಮಾಜದ ನಿರ್ಮಾಣದ ಹಿತದೃಷ್ಟಿಯಿಂದ ಶ್ರೇಷ್ಠ ಸಂವಿಧಾನ ರೂಪಿಸಿದ್ದಾರೆ. ಅವರೊಬ್ಬ ಶ್ರೇಷ್ಠ ವ್ಯಕ್ತಿತ್ವ ಹೊಂದಿದ್ದವರು ಎಂದು ಹೇಳಿದರು.

ಅಂಬೇಡ್ಕರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿದರು. ಸಹಕಾರಿ ಸೌಹಾರ್ಧ ಬ್ಯಾಂಕ್ ಅಧ್ಯಕ್ಷ ಜಿ.ನಂಜನಗೌಡ, ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಕೆ.ಲಕ್ಷ್ಮಣ, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಸ್.ಪಿ.ಲಿಂಬ್ಯನಾಯ್ಕ, ಅವರು, ಅಂಬೇಡ್ಕರ ಜೀವನ ಕಥೆ ಮತ್ತು ಸಾಧನೆಗಳನ್ನು ಸ್ಮರಿಸಿದರು.

ಮುಖಂಡರಾದ ಓಂಕಾರಗೌಡ, ಇಜಂತಕರ್ ಮಂಜುನಾಥ,  ಎಲ್.ಮಂಜನಾಯ್ಕ, ಮೈದೂರು ಮಲ್ಲಿಕಾರ್ಜುನ, ಕೆ.ಲಿಂಗಾನಂದ, ಪ್ರಾಣೇಶ್, ಬೂದಿ ನವೀನ್ ಎಸ್. ಸುರೇಶ್, ಮೇಘ್ಯ ನಾಯಕ್, ನಂದಿಬೇವೂರು ಚಾರಪ್ಪ ,ಸಾಮಿ ನಾಯಕ್, ನಾಗರಾಜ್, ಅಂಜಿನಪ್ಪ, ಭದ್ರಿ ನಾರಾಯಣ ಶೆಟ್ಟಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.