ಹರಪನಹಳ್ಳಿ : ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆಗಳನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಹರಪನಹಳ್ಳಿ ನಗರ ಸಮಿತಿಯಿಂದ ತಹಶೀಲ್ದಾರ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಸೈಬರ್ ವಂಚನೆ ಹೆಚ್ಚಾಗುತ್ತಿದೆ. ಇದರಿಂದ ಸಾವಿರಾರು ಜನರು ಲಕ್ಷಾಂತರ ಹಣ ಕಳೆದುಕೊಂಡಿದ್ದಾರೆ. ಸೈಬರ್ ವಂಚನೆಗೆ ವಿಶೇಷ ಕಾನೂನು ಜಾರಿ ಮಾಡಬೇಕು. ಚಳಿಗಾಲದ ಅಧಿವೇಶನದಲ್ಲಿ ಸೈಬರ್ ವಂಚನೆ ಪ್ರಮುಖ ವಿಷಯವಾಗಿ ಚರ್ಚೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ನಗರ ಘಟಕದ ಅಧ್ಯಕ್ಷ ಐ.ಮುಝಮಿಲ್, ಐ.ಸಾಬೀರ್, ಖಲೀಂವುಲ್ಲಾ ಖಾನ್, ಅಕ್ರಮ್, ಜಮೀರ್ ಅಹ್ಮದ್ ಇದ್ದರು.
Leave a comment