Home ಶಿಕ್ಷಣ ಕರ್ತವ್ಯ ನಿರ್ಲಕ್ಷ್ಯ ಅಧಿಕಾರಿ ನಡೆ ಖಂಡಿಸಿ ಡಿಎಸ್‌ಎಸ್‌ ಪ್ರತಿಭಟನೆ
ಶಿಕ್ಷಣ

ಕರ್ತವ್ಯ ನಿರ್ಲಕ್ಷ್ಯ ಅಧಿಕಾರಿ ನಡೆ ಖಂಡಿಸಿ ಡಿಎಸ್‌ಎಸ್‌ ಪ್ರತಿಭಟನೆ

Share
ದಲಿತ ಸಂಘರ್ಷ ಸಮಿತಿ ಭೀಮವಾದ ಹರಪನಹಳ್ಳಿ
Share

 ಹರಪನಹಳ್ಳಿ : ಡಾ.ಬಿ.ಆರ್.ಅಂಬೇಡ್ಕರ ಅವರ 69ನೇ ವರ್ಷದ ಪರಿನಿರ್ವಾಣ ದಿವಸ ಆಚರಿಸದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೇರಿ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳ ನಡೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಭೀಮವಾದದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು ಗ್ರೇಡ್ 2 ತಹಶೀಲ್ದಾರ ನಟರಾಜ್ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕರ್ತವ್ಯ ನಿರ್ಲಕ್ಷ್ಯ ವಿವಿಧ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ತಾಲ್ಲೂಕು ಅಧ್ಯಕ್ಷ ಕೆ.ಸುಭಾಸ್ ಮಾತನಾಡಿ, ತಹಶೀಲ್ದಾರ ಗಿರೀಶ್ ಬಾಬು ಅವರು ಡಿ.4ರಂದು ಡಾ.ಬಿ.ಆರ್.ಅಂಬೇಡ್ಕರ ಅವರ ಪರಿನಿರ್ವಾಣ ಆಚರಿಸಲು ಎಲ್ಲ ಇಲಾಖೆಗಳಿಗೂ ಲಿಖಿತ ಆದೇಶದ ಮೂಲಕ ಸೂಚಿಸಿದ್ದಾರೆ. ಆದರೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೃಷಿ ಇಲಾಖೆ ಮತ್ತು ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಗಳಲ್ಲಿ ಆಚರಿಸದೇ ತಾಲ್ಲೂಕು ಮಟ್ಟದ ಅಧಿಕಾರಿಗಳು  ನಿರ್ಲಕ್ಷ್ಯವಹಿಸಿದ್ದಾರೆ. ಪ್ರಶ್ನಿಸಲು ಹೋದ ಸಂಘಟಕರಿಗೆ ಸಮರ್ಪಕ ಉತ್ತರ ನೀಡಿಲ್ಲ ಎಂದು ದೂರಿದರು.

[the_ad_placement id=”7089″]

ಶಿಕ್ಷಣ ಇಲಾಖೆಗೆ ಹೋಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ ಅವರು ಕೇಳಿದಾಗ, ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದರು. ಜವಾಬ್ದಾರಿ ಸ್ಥಾನದಲ್ಲಿರುವ ಅಧಿಕಾರಿಯು ತಮ್ಮ ಕಚೇರಿಯಲ್ಲು ಆಚರಿಸಿಲ್ಲ, ಹಾಗೂ ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲೂ ಆಚರಣೆ ಮಾಡಲು ಆದೇಶಿಸದೇ ಕರ್ತವ್ಯ ನಿರ್ಲಕ್ಷ್ಯ ತೋರಿ, ಮಹಾನ್ ವ್ಯಕ್ತಿಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದರು. ಪರಿನಿರ್ವಾಣ ನಿರ್ಲಕ್ಷ್ಯ ಮಾಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಇತರೆ ಇಲಾಖೆ ಅಧಿಕಾರಿಗಳಿಗೆ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ರಾಜು, ಪ್ರಶಾಂತ ಶೃಂಗಾರತೋಟ, ಜಂಟಿ ಕಾರ್ಯದರ್ಶಿ ಡಿ.ಛತ್ರಪತಿ, ಕೆ.ಭರತ್, ನಾಗರಾಜ್ ಬಿದ್ದಾಡಿ, ಮಲ್ಲಿಕಾರ್ಜುನ, ರಮೇಶ, ನಾಗರಾಜ್, ಶ್ರೀಕಾಂತ, ಅಂಜಿನಪ್ಪ ಮಾಳಗಿ, ಶಶಿಕುಮಾರ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Homeಶಿಕ್ಷಣ

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಸಮೂದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ...

Homeಶಿಕ್ಷಣ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಕನ್ನಡ ರತ್ನ ಪ್ರಶಸ್ತಿ’ ಪ್ರದಾನ

ಹರಪನಹಳ್ಳಿ :  ತಾವು ಸಂಪಾದಿಸಿದ ಆದಾಯದಲ್ಲಿ ಸ್ವಲ್ಪ ಹಣ ಕನ್ನಡ ಸೇವೆಗಾಗಿ ಮೀಸಲಿಟ್ಟು ಕೆಲಸ ಮಾಡುತ್ತಿರುವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.