ಬೆಳಗಾವಿ : ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಂಗವಾಗಿ “ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ, ಮಹಿಳಾ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಮೇಳವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಅವರು, ಯಶಸ್ವಿಯಾಗಲಿ ಎಂದು ಶುಭಹಾರೈಸಿದರು. ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
Leave a comment