Home ಶಾಮನೂರು ಶಿವಶಂಕರಪ್ಪ ಇನ್ನಿಲ್ಲ
Home

ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

Share
ಶಾಮನೂರು ಶಿವಶಂಕರಪ್ಪ
Share

ದಾವಣಗೆರೆ : ಅಖಿಲ ಭಾರತ ವೀರಶೈವ  ಲಿಂಗಾಯತ ಮಹಾಸಭಾ ಅಧ್ಯಕ್ಷರು, ದಾವಣಗೆರೆ ದಕ್ಷಿಣ ವಿದಾನಸಭೆ ಕ್ಷೇತ್ರದ ಶಾಸರಾಗಿದ್ದ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು 1931, ಜೂನ್‌ 16ರಂದು ಜನಿಸಿದ್ದರು. ಮುತ್ಸದ್ದಿ ರಾಜಕಾರಣಿ ಆಗಿದ್ದ ಶಿವಶಂಕರಪ್ಪ ಅವರು ಕಾಂಗ್ರೆಸ್‌ ಪಕ್ಷದ ಖಜಾಂಚಿಯಾಗಿ ಹಲವು ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಹಲವು ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಇದರೊಟ್ಟಿಗೆ ಸಮಾಜ ಸೇವೆಯಲ್ಲಿ ಮುಂಚೂಣಿ ವಹಿಸಿದ್ದರು. ಶ್ಯಾಮನೂರ್ ಶಿವಶಂಕರಪ್ಪರವರು ದಾವಣಗೆರೆಯ ಅಂಗವಿಕಲರ ಆಶಾಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರಾಗಿದ್ದರು.  ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿ ಸರಪಳಿಯಾಗಿರುವ, ಬಾಪೂಜಿ ಎಂಜಿನಿಯರಿಂಗ್ ಅಸೋಸಿಯೇಷನ್‌ ಅಧ್ಯಕ್ಷರಾಗಿದ್ದರು. ಮತ್ತು ಕೈಗಾರಿಕೋದ್ಯಮಿಯಾಗಿದ್ದು, ಹರಪನಹಳ್ಳಿ ತಾಲ್ಲೂಕು ದುಗ್ಗಾವತಿ ಗ್ರಾಮದಲ್ಲಿ ಶಾಮನೂರು ಶುಗರ್ಸ್‌ ಸಕ್ಕರೆ ಕಾರ್ಖಾನೆ ಮತ್ತು ಡಿಸ್ಟಿಲರೀಸ್‌ ಉದ್ಯಮ ಕಟ್ಟಿ ಬೆಳೆಸಿದ್ದರು.

ರಾಜಕೀಯ

ಶಿವಶಂಕರಪ್ಪನವರು ದಾವಣಗೆರೆ ಜಿಲ್ಲೆಯಲ್ಲಿ 2008  ಹಾಗು 2013, 2018ರ ವಿಧಾನ ಸಭಾ ಚುನಾವಣೆ ಸೇರಿ ಒಟ್ಟು 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಹಾಗೂ ಸಂಪುಟ ದರ್ಜೆಯ ಸಚಿವರಾಗಿ ಹಲವು ಬಾರಿ ಕಾರ್ಯ ನಿರ್ವಹಿಸಿದ್ದರು.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

Homeಶಿಕ್ಷಣ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥ: ರಾರಾಜಿಸಿದ ಜಾಗೃತಿ ಫಲಕಗಳು

ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು: ನ್ಯಾ.ಸಿದ್ದಲಿಂಗ ಪ್ರಭು ಬಳ್ಳಾರಿ : ಹೆಣ್ಣಾಗಲಿ ಅಥವಾ ಗಂಡಾಗಲಿ, ಪ್ರತಿಯೊಬ್ಬ...

Homeಶಿಕ್ಷಣ

ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ವಿಜಯನಗರ (ಹೊಸಪೇಟೆ) (ಕರ್ನಾಟಕ ವಾರ್ತೆ) ಜೂನ್.11: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.