Home ಸುದ್ದಿಗಳು ಇ ಬೇವಿನಹಳ್ಳಿಯಲ್ಲಿ ಬಸವೇಶ್ವರ ಕಾರ್ತಿಕ
ಸುದ್ದಿಗಳು

ಇ ಬೇವಿನಹಳ್ಳಿಯಲ್ಲಿ ಬಸವೇಶ್ವರ ಕಾರ್ತಿಕ

Share
ಇ ಬೇವಿನಹಳ್ಳಿಯಲ್ಲಿ ಬಸವೇಶ್ವರ ಕಾರ್ತಿಕ
Share

ಹರಪನಹಳ್ಳಿ : ತಾಲ್ಲೂಕಿನ ಇ.ಬೇವಿನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ದೇವರ ಕಾರ್ತಿಕೋತ್ಸವ ಸಡಗರ, ಸಂಭ್ರಮದಿಂದ ಕಾರ್ತಿಕೋತ್ಸವ ಜರುಗಿತು

ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಬಸವೇಶ್ವರ ಸ್ವಾಮಿಗೆ ವಿಶೇಷ ಅಭಿಷೇಕ, ಅಲಂಕಾರ, ವಿಶೇಷ ಪೂಜೆ ನೆರವೇರಿಸಿ, ಹಣತೆ ಬೆಳಗಿ ಸ್ವಾಮಿಗೆ ಭಕ್ತಿ ಸಲ್ಲಿಸಲಾಯಿತು. ಗ್ರಾಮಕ್ಕೆ ಬೇಟಿ ನೀಡಿದ್ದ ವಾಲ್ಮೀಕಿ ಸಮಾಜದ ತಾಲ್ಲೂಕು ಅಧ್ಯಕ್ಷರೂ ಆಗಿರುವ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಅವರು ಮಾತನಾಡಿ, ದೇವರಲ್ಲಿ ನಂಬಿಕೆ, ಶ್ರದ್ಧೆ ಇರಬೇಕು. ಇದರಿಂದ ಮನುಷ್ಯನಿಗೆ ನೆಮ್ಮದಿ ದೊರಕುತ್ತದೆ ಎಂದು ಹೇಳಿದರು.

ಬಳಿಕ ನೀಲಗುಂದ ಗ್ರಾಮದ ವಿವಿದೋದ್ದೇಶ ಗ್ರಾಮೀಣ ಪ್ರಾಥಮಿಕ ಕೃಷಿ ಸಹಕಾರಿ ಸಂಘದಲ್ಲಿ ಪಾಲ್ಗೊಂಡು ಶಾಮನೂರು ಶಿವಶಂಕರಪ್ಪ ಅವರಿಗೆ ನುಡಿನಮನ ಸಲ್ಲಿಸಲಾಯಿತು. ನೀಲಗುಂದ ಗ್ರಾಮದ ವಿವಿದೋದ್ದೇಶ ಗ್ರಾಮೀಣ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಬೇಲೂರು ಸಿದ್ದೇಶ,  ಉಪಾಧ್ಯಕ್ಷ ಎಂ.ಪರಸಪ್ಪ, ನಿರ್ದೇಶಕರಾಗ ಎಚ್. ಮಹೇಶಪ್ಪ,  ಎಚ್. ಚೌಡಪ್ಪ, ಶ್ರೀ ಪಿ. ಕೊಟ್ರಗೌಡ,  ಡಿ. ಪರಶುರಾಮ, ಎ. ಜ್ಯೋತೇಶ, ಎಲ್. ತಿರುಪತಿ, ವಿ.ಜಿ ರಾಜೇಂದ್ರ ಗೌಡ, ಅಕ್ಕಲ್ ರಾಜಪ್ಪ, ಮುಖಂಡರಾದ ಬೋವಿ ಮಹಾಂತೇಶ, ಭರಮರೆಡ್ಡಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಬೋವಿ ಶಿವಕುಮಾರ, ಸೊಸೈಟಿ ಮಾಜಿ ಅಧ್ಯಕ್ಷ ಎಂ.ಕರಿಬಸಪ್ಪ, ಡಿ.ಶಿವಾನಂದಪ್ಪ, ಕೆ.ಮಲ್ಲಿಕಾರ್ಜುನ, ವೈ.ರೇವಣಸಿದ್ದಪ್ಪ, ಜಿ.ಚನ್ನಬಸಪ್ಪ, ಹಾವೇರಿ ರಾಜಪ್ಪ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.