Home ಕ್ರೀಡೆ ವಾರುಣಿ ಮುಡಿಗೇರಿದ ವಿಶ್ವ ಚೆಸ್ ಕಪ್ ಚಾಂಪಿಯನ್
ಕ್ರೀಡೆ

ವಾರುಣಿ ಮುಡಿಗೇರಿದ ವಿಶ್ವ ಚೆಸ್ ಕಪ್ ಚಾಂಪಿಯನ್

Share
ವಾರುಣಿ ಮುಡಿಗೇರಿದ ವಿಶ್ವ ಚೆಸ್ ಕಪ್ ಚಾಂಪಿಯನ್
Share

ಹರಪನಹಳ್ಳಿ : ತಾಲ್ಲೂಕಿನ ಉಚ್ಚಂಗಿದುರ್ಗ ಗ್ರಾಮದ ಡಾ.ಅಶೋಕ ನಂಜನಗೌಡರ ಮತ್ತು ಡಾ.ಶಕುಂತಲಾ ದಂಪತಿ ಪುತ್ರಿ ವಾರುಣಿ ನಂಜನಗೌಡರ ಅವರು ಭಾನುವಾರ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಡಿ.14ರ ಭಾನುವಾರ ಕೊಪ್ಪಳ ನಗರದಲ್ಲಿ ವಿಶ್ವ ಚೆಸ್ ಅಕಾಡೆಮಿ, ಕೊಪ್ಪಳ ಯುವಜನ ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಚೆಸ್ ಚಾಂಪಿಯನ್ ಕಪ್‌-2025ರ 10 ವರ್ಷ ವಯೋಮಿತಿಯ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ವಾರುಣಿ ಅವರು ರಾಜ್ಯಮಟ್ಟದ ಟೂರ್ನಮೆಂಟ್‌ ನಲ್ಲಿ ಪ್ರಥಮ ಸ್ಥಾನ ಪಡೆದು ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.

ಉಚ್ಚಂಗಿದುರ್ಗದ ಪುಷ್ಪಗಿರಿ ಪಬ್ಲಿಕ್‌ ಶಾಲೆಯಲ್ಲಿ 4ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ವಾರುಣಿ ಅವರ ಸಾಧನೆಗೆ ಶಾಲಾಡಳಿತ ಮಂಡಳಿ, ಪೋಷಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಕ್ರೀಡೆ

ಹರಪನಹಳ್ಳಿ : ಸಮತ ರೆಸಾರ್ಟ್‍ನಲ್ಲಿ ವಿಚಾರಗೋಷ್ಠಿ

ಹರಪನಹಳ್ಳಿ : ರಾಜಕೀಯ ಪ್ರಜಾಪ್ರಭುತ್ವ ದುರ್ಬಳಕೆ ಆಗುತ್ತಿದೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರ ಜಾತಿ ಮೇಲೆ...

Homeಕ್ರೀಡೆ

ಸಮತಾ ರೆಸಾರ್ಟ್ ಪ್ರಗತಿಪರ‌‌ ಚಿಂತನೆಗಳ ಕೇಂದ್ರ

ಹರಪನಹಳ್ಳಿ : ಬುದ್ದ, ಬಸವ, ಅಂಬೇಡ್ಕರ್ ಅವರ ಚಿಂತನೆಗಳನ್ನು ಪ್ರಗತಿಪರ ಚಿಂತಕ ಕೋಡಿಹಳ್ಳಿ ಭೀಮಣ್ಣನವರು ತಮ್ಮ...

renukadevi
Homeಕ್ರೀಡೆ

ಪರಿಸರ ಜಾಗೃತಿಗಾಗಿ ದಾವಣಗೆರೆಯಲ್ಲಿ ಸೈಕಲ್ ಜಾಥಾ

ದಾವಣಗೆರೆ  : ಯುವಜನರು ಮತ್ತು ವಿದ್ಯಾರ್ಥಿಗಳು ದೈನಂದಿನ ಜೀವನದಲ್ಲಿ ಸೈಕಲ್ ಬಳಕೆಯನ್ನು ಹೆಚ್ಚಿಸಬೇಕು ಎಂದು ದಾವಣಗೆರೆ...

kannada
Homeಕ್ರೀಡೆ

ಹರಪನಹಳ್ಳಿಯಲ್ಲಿ ಗಮನ ಸೆಳೆದ ಬೀಳ್ಕೊಡುಗೆ

ಹರಪನಹಳ್ಳಿ : ಕ್ರೀಡೆ ಮತ್ತು ಇತರ ದೈಹಿಕ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.