ಹರಪನಹಳ್ಳಿ : ಇಲ್ಲಿಯ ತಾಲ್ಲೂಕು ಕನಕ ನೌಕರರ ಸಂಘದಿಂದ ಡಿ. 21ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಕನಕದಾಸರ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ.
ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗುವ ವಿದ್ಯಾರ್ಥಿಗಳು ಹಾಗೂ ಸಾಧಕರಿಗೆ ಕನಕಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳು ಡಿ.19ರೊಳಗಾಗಿ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗರದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಸನ್ಮಾನಿಸಲಾಗುವುದು.
ಹೆಚ್ಚಿನ ಮಾಹಿತಿಗೆ ಚಂದ್ರಪ್ಪ – 9916052991, ರಾಮಪ್ಪ –97405 92278, ಆನಂದ –81050 97294 ಸಂಖ್ಯೆ ಸಂಪರ್ಕಿಸಲು ತಾಲ್ಲೂಕು ಕನಕ ನೌಕರರ ಸಂಘದ ಅಧ್ಯಕ್ಷ ಎಂ.ಎಂ.ಚಂದ್ರಪ್ಪ, ಕಾರ್ಯದರ್ಶಿ ಎಂ.ಆನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment