Home ಸುದ್ದಿಗಳು ವೈದ್ಯನ ಅನುಚಿತ ವರ್ತನೆ ಖಂಡಿಸಿ ಪ್ರತಿಭಟನೆ
ಸುದ್ದಿಗಳು

ವೈದ್ಯನ ಅನುಚಿತ ವರ್ತನೆ ಖಂಡಿಸಿ ಪ್ರತಿಭಟನೆ

Share
ವೈದ್ಯನ ಅನುಚಿತ ವರ್ತನೆ ಖಂಡಿಸಿ ಪ್ರತಿಭಟನೆ
Share

 ಹರಪನಹಳ್ಳಿ : ಇಲ್ಲಿಯ ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳ ಜೊತೆ ಅನುಚಿತವಾಗಿ ವರ್ತಿಸುತ್ತಿರುವ ದಂತ ವೈದ್ಯನನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಶೃಂಗಾರತೋಟ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಗ್ರಾಮದ ಮಹಿಳೆಯೊಬ್ಬರು ವೈದ್ಯರ ಬಳಿ ತಮ್ಮ ಬಾಲಕಿಯನ್ನು ತಪಾಸಣೆಗೆ ಕರೆದುಕೊಂಡು  ಹೋಗಿದ್ದಾಗ ಅನುಚಿತವಾಗಿ ವರ್ತಿಸಿದ್ದಾರೆ. ಇದನ್ನು ಪ್ರಶ್ನಿಸಿದ ಅವರ ಮನೆಯವರ ಮೇಲೆ ಹಲ್ಲೆ ಯತ್ನ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ವೈದ್ಯ ನಾಗರಾಜ ನಾಯ್ಕ ಅವರು ಹಲವು ವರ್ಷದ ಹಿಂದೆ ಕೆಲಸ ಮಾಡಿದ್ದರು. ಈ ಹಿಂದೆ ಇದೇ ರೀತಿ ಅನುಚಿತವಾಗಿ ವರ್ತಿಸಿದ್ದರಿಂದ ಅಮಾನತುಗೊಂಡು ಹಡಗಲಿಗೆ ವರ್ಗಾವಣೆ ಯಾಗಿದ್ದರು. ಈಗಲೂ ಅದೇ ರೀತಿ ವರ್ತಿಸುತ್ತಿದ್ದು, ಆಸ್ಪತ್ರೆಗೆ ಬರುವ ರೋಗಿಗಳು ರೋಸಿ ಹೋಗಿದ್ದಾರೆ. ಇಂತಹ ವೈದ್ಯರನ್ನು ಅಮಾನತು ಮಾಡಿ, ತನಿಖೆ ಮಾಡಬೇಕು ಎಂದು ಗ್ರಾಮದ ಅಶೋಕ, ಮರಿಯಪ್ಪ ಅವರು ಒತ್ತಾಯಿಸಿದರು. ಮುಖಂಡರಾದ ಆಲೂರು ಶ್ರೀನಿವಾಸ, ಗಿರೀಶ, ಭರಮಪ್ಪ, ಮಂಜುನಾಥ, ಟಿ.ಉಚ್ಚಂಗೆಪ್ಪ, ಎಚ್.ನಾಗಪ್ಪ, ದುರುಗಪ್ಪ, ರಮೇಶ, ಸುರೇಶ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.