Home ಶಿಕ್ಷಣ   ಶಿಕ್ಷಣದಿಂದ ಸಮಾನತೆ ಸಾಧ್ಯ : ಜಿ.ಬಿ.ವಿನಯ್ ಕುಮಾರ
ಶಿಕ್ಷಣ

  ಶಿಕ್ಷಣದಿಂದ ಸಮಾನತೆ ಸಾಧ್ಯ : ಜಿ.ಬಿ.ವಿನಯ್ ಕುಮಾರ

Share
  ಶಿಕ್ಷಣದಿಂದ ಸಮಾನತೆ ಸಾಧ್ಯ : ಜಿ.ಬಿ.ವಿನಯ್ ಕುಮಾರ
Share

ಹರಪನಹಳ್ಳಿ : ಸರ್ವರಿಗೂ ಸಮಾನ ಶಿಕ್ಷಣ ದೊರೆತಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಇನ್‍ ಸೈಟ್‍ ಸಂಸ್ಥೆ ಸಂಸ್ಥಾಪಕ ಜಿ.ಬಿ.ವಿನಯ್ ಕುಮಾರ ಹೇಳಿದರು.

ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ತಾಲೂಕು ಕನಕ ನೌಕರರ ಸಂಘ, ತಾಲ್ಲೂಕು ಬೀರೇಶ್ವರ ಕುರುಬ ಸಂಘ ಹಾಗೂ ಕನಕ ಯುವ ಘಟಕ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ದಾಸ ಶ್ರೇಷ್ಠ ಭಕ್ತ ಕನಕದಾಸರ 539ನೇ ಜಯಂತಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಇದನ್ನು ಸುಧಾರಣೆ ಮಾಡಲು ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಕೆಪಿಎಸ್ ಸಿ ಸುಧಾರಣೆ ಆಗುವ ಬಯಕೆಯಿಂದ ನಾನು ರಾಜಕೀಯಕ್ಕೆ ಬಂದಿರುವೆ. ಇದು ಸುಧಾರಿಸಿದರೆ, ಪ್ರತಿ ವರ್ಷ ಲಕ್ಷಾಂತರ ಅರ್ಹರಿಗೆ ಕೆಲಸ ಸಿಗುತ್ತದೆ ಎಂದರು.

ಕುರುಬ ಸಂಘದ ರಾಜ್ಯ ಹಿರಿಯ ರಾಜ್ಯ ಉಪಾಧ್ಯಕ್ಷ ಎಚ್.ಬಿ.ಪರಶುರಾಮಪ್ಪ ಮಾತನಾಡಿ, ಎಲ್ಲ ಸಮಾಜದ ಮುಖಂಡರು ಒಳಗೊಂಡು ಮಾಡುವ ಇಂತಹ ಕಾರ್ಯಕ್ರಮಗಳು ಕನಕದಾಸರ ಕೀರ್ತನೆಯಂತೆ ಸಾಮರಸ್ಯದ ಸಂದೇಶ ಸಾರುತ್ತವೆ ಎಂದರು.

ಕನಕ ನೌಕರರ ಸಂಘದ ಅಧ್ಯಕ್ಷ ಎಂ.ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಬೀರೇಶ್ವರ ಕುರುಬ ಸಂಘದ ತಾಲ್ಲೂಕು ಅಧ್ಯಕ್ಷ ಬಂಡ್ರಿ ಬಿ.ಗೋಣಿಬಸಪ್ಪ, ನೌಕರರ ಸಂಘದ ಗೌರವ ಅಧ್ಯಕ್ಷ ಎಸ್. ರಾಮಪ್ಪ,  ವಕೀಲ ಬಸವರಾಜ ಹುಲಿಯಪ್ಪನವರ್,  ಬಸವರಾಜ ಸಂಗಪ್ಪನವರ್ ಮಾತನಾಡಿದರು. ಕುರುಬ ಸಮಾಜದ ಬಸವರಾಜಪ್ಪಮತ್ತು ನಿವೃತ್ತ ಶಿಕ್ಷಕ ದುರುಗಪ್ಪ ಅವರಿಗೆ ಕನಕ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.  ಸಹಾಯಕ ನಿರ್ದೇಶಕ ಆನಂದ ಡೊಳ್ಳಿನ, ಎಚ್.ವಸಂತಪ್ಪ, ಬಳಿಗನೂರು ಪರಶುರಾಮ, ಮುತ್ತಿಗಿ ಜಂಬಣ್ಣ, ಮೈದೂರು ಮಲ್ಲಿಕಾರ್ಜುನ, ಭರತೇಶ, ಯಲ್ಲಮ್ಮ, ಪ್ರಭಾಕರ, ವೆಂಕಟೇಶ ಬಾಗಲಾರ, ನಂದೀಶಬಾಬು ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.