Home ಸುದ್ದಿಗಳು ಹರಪನಹಳ್ಳಿ ನಗರಸಭೆಗೆ ಕವಿತಾ ಮನ್ನಿಕೇರಿ ಆಡಳಿತ ಅಧಿಕಾರಿ 
ಸುದ್ದಿಗಳು

ಹರಪನಹಳ್ಳಿ ನಗರಸಭೆಗೆ ಕವಿತಾ ಮನ್ನಿಕೇರಿ ಆಡಳಿತ ಅಧಿಕಾರಿ 

Share
ಹರಪನಹಳ್ಳಿ ನಗರಸಭೆಗೆ ಕವಿತಾ ಮನ್ನಿಕೇರಿ ಆಡಳಿತ ಅಧಿಕಾರಿ 
Share

ಹರಪನಹಳ್ಳಿ : ಇಲ್ಲಿಯ ನಗರಸಭೆಗೆ ಆಡಳಿತಾಧಿಕಾರಿ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರನ್ನು ನೇಮಿಸಿ ನಗರಾಭಿವೃದ್ದಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಅವರು ತಿದ್ದುಪಡಿ ಆದೇಶ ಹೊರಡಿಸಿದ್ದಾರೆ.

ನ.19ರಂದು ಹರಪನಹಳ್ಳಿ ಪುರಸಭೆಯ ಆಡಳಿತಾಧಿಕಾರಿಯಾಗಿ ಕಂದಾಯ ಇಲಾಖೆ ಉಪವಿಬಾಗಾಧಿಕಾರಿಯನ್ನು ನೇಮಿಸಿದ್ದರು. ಈಗ ಪುರಸಭೆ ಮೇಲ್ದರ್ಜೆ ಪಡೆದು ನಗರಸಭೆ ಆಗಿರುವ ಕಾರಣ, ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿಯನ್ನು ನೇಮಿಸಿ ಡಿ.24ರಂದು ಟಿ.ಮಂಜುನಾಥ ಅವರು ಆದೇಶಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಇಲ್ಲಿಯ ನಗರಸಭೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ನಗರಸಭೆಯ ವಿವರವಾದ ಮಾಹಿತಿ  ಪಡೆದುಕೊಂಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.