Home ಸುದ್ದಿಗಳು ಸ್ವಯಂ ಉದ್ಯೋಗ ತರಬೇತಿಗೆ : ಅರ್ಜಿ ಆಹ್ವಾನ
ಸುದ್ದಿಗಳು

ಸ್ವಯಂ ಉದ್ಯೋಗ ತರಬೇತಿಗೆ : ಅರ್ಜಿ ಆಹ್ವಾನ

Share
Share

ವಿಜಯನಗರ (ಹೊಸಪೇಟೆ)  : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ವಿಜಯನಗರ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ತರಬೇತಿ ಅವಧಿಯಲ್ಲಿ 34 ದಿನಗಳ ಬ್ಯೂಟಿಪಾರ್ಲರ್ ತರಬೇತಿ, 14 ದಿನಗಳ ಕುರಿ ಸಾಕಾಣಿಕೆ, 31 ದಿನಗಳ ಮೊಬೈಲ್ ರಿಪೇರಿ ಕುರಿತು ತರಬೇತಿ ನೀಡಲಾಗುದು. ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು. ತರಬೇತಿ ವೇಳೆಯಲ್ಲಿ ಊಟದ ವ್ಯವಸ್ಥೆಯೂ ಸಹ ಒದಗಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ: ಅರ್ಜಿದಾರರು 18 ವರ್ಷದ ಮೇಲ್ಪಟ್ಟಿರಬೇಕು. 50 ವರ್ಷಗಳ ಮೀರಿರಬಾರದು. ಕನಿಷ್ಠ 8ನೇ ತರಗತಿ ವಿದ್ಯಾಭ್ಯಾಸ ಹೊಂದಿರಬೇಕು. ಜಿಲ್ಲೆಯ ಗ್ರಾಮೀಣ ಭಾಗದವರಾಗಿರುವುದರ ಜತೆಗೆ ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ತರಬೇತಿಯು ಇದೇ ಜನವರಿ 18 ರಿಂದ ಆರಂಭವಾಗಲಿದ್ದು, ಜನವರಿ 16 ರಂದು ಸಂದರ್ಶನ ದಿನಾಂಕ ನಿಗಧಿಪಡಿಸಲಾಗಿದೆ.
ಆಸಕ್ತರು ಆಸಕ್ತಿಯುಳ್ಳವರು ಆಧಾರ್ ಕಾರ್ಡ್, ಪಡಿತರ ಚೀಟಿ, ಪಾಸ್ ಪೋರ್ಟ್ ಸೈಜ್ ಭಾವಚಿತ್ರ 3, ಅಂಕಪಟ್ಟಿ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಜೆರಾಕ್ಸ್ ಪ್ರತಿಗಳೊಂದಿಗೆ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣ, ಪೈ-ಹೋಟೆಲ್ ಎದುರು ಬಸ್ ಸ್ಟಾö್ಯಂಡ್ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ 6360467103, 9741987137, 9663471468 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.