Home ಶಿಕ್ಷಣ ಉಚ್ಚಂಗಿದುರ್ಗ : ಪುಷ್ಪಗಿರಿ ಶಾಲೆಯಲ್ಲಿ ವಸ್ತು ಪ್ರದರ್ಶನ
ಶಿಕ್ಷಣ

ಉಚ್ಚಂಗಿದುರ್ಗ : ಪುಷ್ಪಗಿರಿ ಶಾಲೆಯಲ್ಲಿ ವಸ್ತು ಪ್ರದರ್ಶನ

Share
Share

ಹರಪನಹಳ್ಳಿ : ತಾಲ್ಲೂಕಿನ ಉಚ್ಚಂಗಿದುರ್ಗ ಗ್ರಾಮದ ಪುಷ್ಪಗಿರಿ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವು ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ವೇದಿಕೆಯಾಗಿ ಹೊರಹೊಮ್ಮಿತು.

ವಿದ್ಯಾರ್ಥಿಗಳು ವಿವಿಧ ಮಾದರಿಗಳು, ರಸಗೊಬ್ಬರ ತಯಾರಿಕಾ ವಿಧಾನ, ಹಸಿ ಹಾಗೂ ಒಣ ಕಸ ವಿಂಗಡಣೆ, ಆಹಾರ ಸಂಸ್ಕರಣೆಯ ವಿಧಾನಗಳು, ಮಣ್ಣಿನ ಫಲವತ್ತತೆ ಹೆಚ್ಚಿಸುವುದು, ಪರಿಸರ ಸಂರಕ್ಷಣೆ, ನೀರಿನ ಮೂಲಗಳು ಹಾವುಗಳ ಸಂರಕ್ಷಣೆ, ಅರಣ್ಯ ನಾಶದಿಂದಾಗುವ ದುಷ್ಪರಿಣಾಮಗಳು, ಪರಿಸರ ಸಮತೋಲನ ಕಾಪಾಡುವಲ್ಲಿ ವನ್ಯಜೀವಿಗಳ ಪಾತ್ರ ಒಳಗೊಂಡು 165 ಮಾದರಿಗಳನ್ನು ತಯಾರಿಸಿ ಗಮನ ಸಳೆದರು.

ಶಾಲೆಗೆ ಬೇಟಿ ನೀಡಿದ್ದ ಪೋಷಕರು ಹಾಗೂ ಸಾರ್ವಜನಿಕರು, ಮಕ್ಕಳು ತಯಾರಿಸಿದ್ದ ವಿಜ್ಞಾನದ ಮಾದರಿಗಳನ್ನು ವೀಕ್ಷಣೆ ಮಾಡಿ ಸಂತಸಪಟ್ಟರು. ಮಕ್ಕಳಲ್ಲಿರುವ ಕ್ರಿಯಾಶೀಲತೆ, ವಿಜ್ಞಾನದ ಬಗ್ಗೆ ಇರುವ ಕುತೂಹಲ ಕಂಡು ಬೆರಗಾದರು. ಶಾಲಾ ಕ್ರೀಡಾಕೂಟದಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ, ಪದಕ ನೀಡಿ ಪ್ರೋತ್ಸಾಹಿಸಲಾಯಿತು. ವಸ್ತು ಪ್ರದರ್ಶನದಲ್ಲಿ ಉತ್ತಮ ಮಾದರಿಗೆ ಬಹುಮಾನ ವಿತರಿಸಿದರು.ಚಾಲನೆ ನೀಡಿದ ಶಕುಂತಲಾ ಮಾತನಾಡಿ,ದೇಶದ ಸಮಗ್ರ ಪ್ರಗತಿಗೆ ಶಿಕ್ಷಣ ಪ್ರಮುಖ ಅಸ್ತ್ರವಾಗಿದೆ. ಪುಷ್ಪಗಿರಿ ಶಾಲೆ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಹೆಮ್ಮೆ ಎನಿಸುತ್ತಿದೆ  ಎಂದರು. ಪುಷ್ಪಗಿರಿ ಕಲ್ಯಾಣ ಸಂಸ್ಥೆ ಅಧ್ಯಕ್ಷ ಮಹಾರುದ್ರಾಚಾರ್,   ಕಾರ್ಯದರ್ಶಿ ನಾಗರಾಜಪ್ಪ ಮಾತನಾಡಿದರು. ಆಡಳಿತ ಮಂಡಳಿ ನಿರ್ದೇಶಕ ಪ್ರಶಾಂತ್ ಎನ್. ಮುಖ್ಯ ಶಿಕ್ಷಕ ಸಂತೋಷ್ ಸೇರಿದಂತೆ ಶಿಕ್ಷಕರು ಪೋಷಕರು ಹಾಜರಿದ್ದರು.

‘ಮಕ್ಳಳ ಸೃಜನಶೀಲತೆ, ಆಸಕ್ತಿ, ಪ್ರತಿಭೆ ಅನಾವರಣಗೊಳ್ಳಲು ವಸ್ತು ಪ್ರದರ್ಶನ ಸಾಕ್ಷಿಯಾಗಿದೆ. ಕಲಿಕೆಯ ಜ್ಞಾನ ಎಲ್ಲರಿಗೂ ತಲುಪಲಿ’

 ನಾಗರಾಜಪ್ಪ, ಶಾಲಾ ಕಾರ್ಯದರ್ಶಿ

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Homeಶಿಕ್ಷಣ

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಸಮೂದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ...

Homeಶಿಕ್ಷಣ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಕನ್ನಡ ರತ್ನ ಪ್ರಶಸ್ತಿ’ ಪ್ರದಾನ

ಹರಪನಹಳ್ಳಿ :  ತಾವು ಸಂಪಾದಿಸಿದ ಆದಾಯದಲ್ಲಿ ಸ್ವಲ್ಪ ಹಣ ಕನ್ನಡ ಸೇವೆಗಾಗಿ ಮೀಸಲಿಟ್ಟು ಕೆಲಸ ಮಾಡುತ್ತಿರುವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.