Home ಸುದ್ದಿಗಳು ಪುಣಬಗಟ್ಟಿ : ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ
ಸುದ್ದಿಗಳು

ಪುಣಬಗಟ್ಟಿ : ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

Share
ಪುಣಬಗಟ್ಟಿ : ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ
Share

ಹರಪನಹಳ್ಳಿ : ರೈತರ ಪಂಪ್‌ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಪುಣಬಗಟ್ಟಿ ವಿದ್ಯುತ್ ಪ್ರಸರಣ ಕೇಂದ್ರದ ಆವರಣದಲ್ಲಿ ಶನಿವಾರ ರೈತರು ಅಡುಗೆ ಮಾಡಿ ಪ್ರತಿಭಟನೆ ನಡೆಸಿದರು.

ರೈತರ ಪಂಪ್ ಸೆಟ್ ಗಳಿಗೆ ಸರಿಯಾಗಿ ವೋಲ್ಟೇಜ್ ಬರುತ್ತಿಲ್ಲ, ಮೋಟರ್ ಗಳು ಸುಟ್ಟಿವೆ. 3 ವರ್ಷಗಳಿಂದ ಕೇವಲ ಆಶ್ವಾಸನೆ ನೀಡುತ್ತಾ ಬಂದಿದ್ದಾರೆ. ರೈತರ ಪಂಪ್ ಸೆಟ್ ಗಳಿಗೆ ಹಗಲು ಸಮಯದಲ್ಲಿ 7 ತಾಸು  ವಿದ್ಯುತ್  ಪೂರೈಸಬೇಕು‌ ಎಂದು ಬೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೋಡಲ್ ಅಧಿಕಾರಿ ನೂರ್ ಅಹಮ್ಮದ್ ಮಾತನಾಡಿ, 8 ಎಂ ಜಿ ಯಿಂದ 20 ಎಂ ಜಿ ವರೆಗೆ ಟ್ರಾನ್ಸ್ ಫಾರಂ ಪರಿವರ್ತನೆ ಕೆಲಸ‌ ಆಗಬೇಕಿದೆ.  3 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ, 20 ಎಂ.ಜಿ.ಟ್ರಾನ್ಸ ಪಾರ್ಮರ್ ಗೆ ಚಾಲನೆ ನೀಡಲಾಗವುದು ಎಂದು ಭರವಸೆ ನೀಡಿದರು. ಎಇಇ ಪಂಡಿತರಾಧ್ಯ ಮಾತನಾಡಿ, ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮವಹಿಸುವುದಾಗಿ ತಿಳಿಸಿದರು. ರೈತ ಮುಖಂಡರಾದ‌ ಸಿದ್ದೇಶ್, ಸತ್ತೂರು ಮಹಾದೇವಪ್ಪ ಮಾತನಾಡಿದರು.  ರೈತರಾದ  ಲೋಕಪ್ಪ, ಜ್ಯೋತೆಪ್ಪ, ಮಹಾದೇವಪ್ಪ, ಗೋಣೆಪ್ಪ,ಎಸ್.ಜ್ಯೋತೆಪ್ಪ,ಸುನೀಲ್, ಕೆ.ಮಂಜು,ಅಣ್ಣಪ್ಪ, ಇಂದ್ರಯ್ಯ, ಸಿದ್ದೇಶ್, ಕರಿಬಸಪ್ಪ, ಬಸವರಾಜಪ್ಪ, ಹನಮಂತಪ್ಪ, ಬಣಕಾರ್ ಸಿದ್ದಪ್ಪ, ಪ್ರಕಾಶ್, ಶೇಖರಪ್ಪ, ಅಶೋಕ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.