Home ಹೆಲ್ಮೆಟ್ ನಿರ್ಲಕ್ಷ್ಯ ಮಾಡದಿರಿ : ಡಿವೈಎಸ್ಪಿ ಸಂತೋಷ್
Homeಸುದ್ದಿಗಳು

ಹೆಲ್ಮೆಟ್ ನಿರ್ಲಕ್ಷ್ಯ ಮಾಡದಿರಿ : ಡಿವೈಎಸ್ಪಿ ಸಂತೋಷ್

Share
ಹೆಲ್ಮೆಟ್ ಧರಿಸಲು ನಿರ್ಲಕ್ಷ್ಯ ಮಾಡದಿರಿ : ಡಿವೈಎಸ್ಪಿ ಸಂತೋಷ್
Share

ಹರಪನಹಳ್ಳಿ : ವಾಹನ ಚಾಲನಾ ಸಮಯದಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದನ್ನಿ ನಿರ್ಲಕ್ಷ್ಯ ಮಾಡಬೇಡಿ ಎಂದು ಇಲ್ ಡಿ.ವೈ.ಎಸ್.ಪಿ ಸಂತೋಷ್ ಚೌವ್ಹಾಣ್ ಹೇಳಿದರು.
ನಗರದ ಹರಪನಹಳ್ಳಿ ಪೊಲೀಸ್ ಠಾಣೆಯ ಆವರಣದಲ್ಲಿ 39ನೇ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಆಯೋಜಿಸಿದ್ದ ರಸ್ತೆ ಸುರಕ್ಷಿತ ಜಾಗೃತಿ, ಹಾಗೂ ಹೆಲ್ಮೆಟ್ ಧರಿಸುವ ಅರಿವು ಮೂಡಿಸುವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಹೆಲ್ಮೆಟ್‌ ಜೀವರಕ್ಷಕ, ಅದನ್ನು ಧರಿಸಲು ನಿರ್ಲಕ್ಷ್ಯ ಮಾಡಬಾರದು ಎಂದು ಸಲಹೆ ನೀಡಿದರು. ಸಿಪಿಐ ಮಹಾಂತೇಶ್ ಜಿ.ಸಜ್ಜನ್ ಮಾತನಾಡಿ,  ಕುಡಿದು ವಾಹನ ಚಲಿಸುವುದು ಅಪರಾಧ. ವಾಹನ ಚಲಾಯಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ವಿಮೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಸ್ಥಳೀಯ ಠಾಣೆ  ಪೋಲಿಸರು ಹೆಲ್ಮೆಟ್ ಧರಿಸಿಕೊಂಡು  ಠಾಣೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ , ಹಳೇ ಬಸ್ ನಿಲ್ದಾಣ, ಇಜಾರಿ ಶಿರಸಪ್ಪ ವೃತ್ತ, ಹರಿಹರ ಸರ್ಕಲ್, ಬಸ್ ನಿಲ್ದಾಣ, ನಗರಸಭೆ ಹಾದು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹೆಲ್ಮೆಟ್ ಜಾಗೃತಿ‌ ಮೂಡಿಸಿದರು. ಪಿಎಸ್ಐಗಳಾದ  ಶಂಭುಲಿಂಗ ಸಿ.ಹೀರೆಮಠ್,  ಕಿರಣ್ ಕುಮಾರ್, ವಿಜಯ ಕೃಷ್ಣ,  ನಾಗರತ್ನ, ಮೀನಾಕ್ಷಿ ಹಾಗೂ ಸಿಬ್ಬಂದಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.