Home ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ : ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್
Homeರಾಜಕೀಯ

ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ : ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್

Share
ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ : ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್
Share

ಹರಪನಹಳ್ಳಿ  : 2028ರ ವರೆಗೆ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ತಿಳಿಸಿದರು.

ತಾಲ್ಲೂಕಿನ ತಾವರಗುಂದಿ ಗ್ರಾಮದ ಬಳಿ ತುಂಗಭದದ್ರಾ ನದಿತಟದಲ್ಲಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರು ಹಮ್ಮಿಕೊಂಡಿದ್ದ ಮಕರ ಸಂಕ್ರಮಣ ನಿಮಿತ್ತ ಜಾನಪದ ಸಂಕ್ರಾಂತಿ ಕಾರ್ಯಕ್ರಮ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನವೆಂಬರ್, ಡಿಸೆಂಬರ್, ಸಂಕ್ರಾಂತಿ ಎಲ್ಲವೂ ಮುಗಿದಿದೆ. ಸಿಎಂ ಬದಲಾವಣೆ ಹೈಕಮಾಂಡ್ ನಿಂದ ಮಾತ್ರ ಸಾಧ್ಯ, ಅವರ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ. 2028ರ ವರೆಗೂ ಸಿಎಂ ಕುರ್ಚಿ ಖಾಲಿಯಿಲ್ಲ ಎಂದು ಹೇಳಿದರು.ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ತಮಿಳುನಾಡಿಗೆ ಹೋಗುವಾಗ ಮೈಸೂರಿಗೆ ಬಂದಿಳಿದು ಹೋಗಿದ್ದಾರೆ. ಅವರು  ಬಂದಾಗ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರು ಖುದ್ದು ಬೇಟಿಯಾಗಿ ಹೈಕಮಾಂಡ್ ಸ್ವಾಗತಿಸಿರುವುದು ಸಹಜ ಪ್ರಕ್ರಿಯೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ಅಧಿಕಾರಿಗಳ ಜೊತೆ ರಾಜಕಾರಣಿಗಳು ಪ್ರೀತಿಯಿಂದ ಮಾತನಾಡಬೇಕು. ರಾಜೀವಗೌಡ ಅವರ ಭಾಷಣ  ನಾನು ಕೇಳಿದೆ, ಅವರು ಮಾತನಾಡಿರುವುದು ತಪ್ಪು. ಎಂ.ಪಿ.ಪ್ರಕಾಶ್ ಅವರು ನವೆಂಬರ್ ನಲ್ಲಿ ಹಂಪಿಉತ್ಸವ ಮಾಡುತ್ತಿದ್ದರು, ಅದೇ ದಿನಾಂಕಕ್ಕೆ ಮಾಡಲು ಶಾಸಕಿ ಎಂ.ಪಿ.ಲತಾ ಅವರು ಮನವಿ ಮಾಡಿದ್ದರು. ಕೋವಿಡ್ ಬಳಿಕ ಆ ಸಂಪ್ರದಾಯ ತಪ್ಪಿದೆ. 2026ರಲ್ಲಿ ಫೆಬ್ರವರಿ 13,14 ಮತ್ತು 15ರಂದು ಉತ್ಸವ ಜರುಗಲಿದೆ. ಇದಾದ ಬಳಿಕ ಎಂ.ಪಿ.ಪ್ರಕಾಶ್ ಅವರು ಮಾಡಿರುವ ದಿನಾಂಕದಂತೆ ಮಾಡುವ ಬಗ್ಗೆ ನಿರ್ಧರಿಸುತ್ತೇವೆ ಎಂದರು.

ಕಳೆದ ಚುನಾವಣೆಯಲ್ಲಿ ಶಿವಶಂಕರಪ್ಪ ಅವರೇ ನನ್ನದು ಕೊನೆ ಚುನಾವಣೆ ಎಂದು ಹೇಳಿದ್ದರಂತೆ. ಆ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಬಹಳ ಜನ ಮುಖಂಡರು ಆಗಮಿಸಿ, ದಾವಣಗೆರೆ ದಕ್ಷಿಣ ವಿದಾನಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡಲು ಮನವಿ ಮಾಡಿದ್ದಾರೆ. ಟಿಕೆಟ್ ವಿಚಾರವನ್ನು ನಮ್ಮ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್, ಹೊನ್ನಾಳಿ ಶಾಸಕ ಡಿ.ಜೆ.ಶಾಂತನಗೌಡ, ಮುಖಂಡ ಎಚ್.ಎಂ.ಮಲ್ಲಿಕಾರ್ಜುನ, ಎಚ್.ಎಂ.ಗೌತಮ್ ಪ್ರಭು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.