Home ಅಪರಾಧ ರಾಗಿಮಸಲವಾಡ : ನೀರಲ್ಲಿ ಮುಳುಗಿ ಬಾಲಕ ಸಾವು
ಅಪರಾಧಸುದ್ದಿಗಳು

ರಾಗಿಮಸಲವಾಡ : ನೀರಲ್ಲಿ ಮುಳುಗಿ ಬಾಲಕ ಸಾವು

Share
ರಾಗಿಮಸಲವಾಡ : ನೀರಲ್ಲಿ ಮುಳುಗಿ ಬಾಲಕ ಸಾವು
Share

 ಹರಪನಹಳ್ಳಿ : ಗೋಕಟ್ಟೆ (ಚೆಕ್‌ ಡ್ಯಾಂ)ನಲ್ಲಿ ಗೆಳೆಯರೊಂದಿಗೆ ಈಜಲು ಹೋಗಿದ್ದ ಬಾಲಕನೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ರಾಗಿಮಸಲವಾಡ ಗ್ರಾಮದಲ್ಲಿ ಭಾನುವಾರ ಜರುಗಿದ್ದು, ಸೋಮವಾರ ಮೃತದೇಹ ಪತ್ತೆಯಾಗಿದೆ.

ಗ್ರಾಮದ ಹನುಮಂತಪ್ಪ ಮತ್ತು ಭಾಗ್ಯಮ್ಮ ದಂಪತಿಯ ಪುತ್ರ ಸಿದ್ದಾರ್ಥ (11) ಸಾವನ್ನಪ್ಪಿದ ಬಾಲಕ. ಗ್ರಾಮದ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ಬಾಲಕ, ಭಾನುವಾರ ಶಾಲೆಗೆ ರಜೆ ಇದ್ದ ಕಾರಣ, ಸಂಜೆ 4 ಗಂಟೆ ವೇಳೆಗೆ ಮೂರು ಜನ ಸ್ನೇಹಿತರು ಗೋಕಟ್ಟೆಗೆ ಈಜಲು ಹೋಗಿದ್ದಾರೆ. ಮೊದಲು ಮೃತ ಸಿದ್ದಾರ್ಥ ನೀರಿಗೆ ಇಳಿದಿದ್ದು, ಮುಳುಗಿದ್ದಾನೆ. ದಡದಲ್ಲಿ ನಿಂತಿದ್ದ ಸ್ನೇಹಿತರು ಆತಂಕಗೊಂಡು, ಗ್ರಾಮಸ್ಥರನ್ನು ಕರೆತರುವಷ್ಟರಲ್ಲಿ ಸಿದ್ದಾರ್ಥ್‌ ನೀರಲ್ಲಿ ನಾಪತ್ತೆಯಾಗಿದ್ದಾನೆ. ಕತ್ತಲು ಆವರಿಸಿದ್ದರಿಂದ ಪತ್ತೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು.

ರಾಗಿಮಸಲವಾಡ : ನೀರಲ್ಲಿ ಮುಳುಗಿ ಬಾಲಕ ಸಾವು

ಬೆಳಗಿನ ಜಾವವೇ ಗೋಕಟ್ಟೆ ತೆರಳಿ, ಯಂತ್ರ ಚಾಲಿತ ಮೋಟಾರಿನಿಂದ ನೀರು ಹೊರಗಡೆ ಸಾಗಿಸಿದ್ದಾರೆ. ನೀರು ಇಳಿಮುಖವಾದಾಗ ನೀರಿನ ಕಟ್ಟೆಗಿಳಿದ ಗ್ರಾಮಸ್ಥರು ಬಾಲಕನ ಮೃತದೇಹ ಪತ್ತೆ ಹಚ್ಚಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತೆಲಿಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಹನುಮಂತಪ್ಪ ದಂಪತಿಗೆ ಇಬ್ಬರು ಪುತ್ರಿಯರಿದ್ದಾರೆ.  ಪುತ್ರನನ್ನು ಕಳೆದುಕೊಂಡಿರುವ ಹೆತ್ತವರು ಮತ್ತು ಸಹೋದರಿಯರ ಅಕ್ರಂಧನ ಮುಗಿಲು ಮುಟ್ಟಿತ್ತು. ಹಲುವಾಗಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.