ಹರಪನಹಳ್ಳಿ : ತಾಲ್ಲೂಕಿನ ಅನಂತನಹಳ್ಳಿ ಬಳಿಯಿರುವ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2026-27ನೇ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಫೆ.25ಕ್ಕೆ ಮುಕ್ತಾಯಗೊಳ್ಳಲಿದೆ. ಈಗ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರು. www.schooleducation.kar.nic.in ಹಾಗೂ www.vidyavahini.karnataka.gov.in ಸಾಮಾಜಿಕ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು. ಮಾರ್ಚ್ 15ಕ್ಕೆ ಪ್ರವೇಶ ಪರೀಕ್ಷೆಗಳು ನಡೆಯಲಿವೆ. ಹೆಚ್ಚಿನ ಮಾಹಿತಿಗೆ ಮುಖ್ಯಶಿಕ್ಷಕ ಎಚ್.ಕೆ.ಚಂದ್ರಪ್ಪ, 9880955078, 94806 75698 ಶಿಕ್ಷಣ ಸಂಯೋಜಕರಾದ ಪಂಪಾನಾಯ್ಕ, ಜಗದೀಶ್ ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Leave a comment