Home ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
Homeಸುದ್ದಿಗಳು

ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Share
Share
ವಿಜಯನಗರ (ಹೊಸಪೇಟೆ) : ರೇಷ್ಮೆ ಇಲಾಖೆಯಿಂದ 2023-24 ಮತ್ತು 2024-25 ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿದ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
 ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ರೇಷ್ಮೆ ಬೆಳೆಗಾರರು ಕನಿಷ್ಠ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ, ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳೊಂದಿಗೆ ಅರ್ಹ ರೈತರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು ಅಥವಾ ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿಗೆ ಫೆಬ್ರವರಿ 5 ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಪ್ರಕಟಣೆ ತಿಳಿಸಿದೆ.
Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

Homeಶಿಕ್ಷಣ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥ: ರಾರಾಜಿಸಿದ ಜಾಗೃತಿ ಫಲಕಗಳು

ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು: ನ್ಯಾ.ಸಿದ್ದಲಿಂಗ ಪ್ರಭು ಬಳ್ಳಾರಿ : ಹೆಣ್ಣಾಗಲಿ ಅಥವಾ ಗಂಡಾಗಲಿ, ಪ್ರತಿಯೊಬ್ಬ...

Homeಶಿಕ್ಷಣ

ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ವಿಜಯನಗರ (ಹೊಸಪೇಟೆ) (ಕರ್ನಾಟಕ ವಾರ್ತೆ) ಜೂನ್.11: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.